HomeBelgaumಕಿತ್ತೂರು ಉತ್ಸವ ಆರಂಭಿಸಿದ್ದು ನಮ್ಮ ಸರ್ಕಾರ: ಸಿ.ಎಂ ಸಿದ್ದರಾಮಯ್ಯ

ಕಿತ್ತೂರು ಉತ್ಸವ ಆರಂಭಿಸಿದ್ದು ನಮ್ಮ ಸರ್ಕಾರ: ಸಿ.ಎಂ ಸಿದ್ದರಾಮಯ್ಯ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಬೆಳಗಾವಿ: ವ್ಯಾಪಾರಕ್ಕೆಂದು ಬಂದ ಬ್ರಿಟೀಷರು ಭಾರತೀಯರನ್ನು ಪರಸ್ಪರ ಎತ್ತಿ ಕಟ್ಟಿಸಿ ಭಾರತವನ್ನು ವಶಕ್ಕೆ ಪಡೆದರು. ಈಗಲೂ ಜಾತಿ-ಧರ್ಮದ ಹೆಸರಲ್ಲಿ ಭಾರತೀಯರನ್ನು ಎತ್ತಿ ಕಟ್ಟುವವರು ಇದ್ದಾರೆ. ಇವರ ಬಗ್ಗೆ ಎಚ್ಚರವಿರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಜಿಲ್ಲಾಡಳಿತ ಮತ್ತು ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಆಯೋಜಿಸಿದ್ದ 201ನೇ ವರ್ಷದ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

1857ರ ಸಿಪಾಯಿ ದಂಗೆಗೂ 33 ವರ್ಷಗಳ ಮೊದಲು ಬ್ರಿಟೀಷರನ್ನು ಕಿತ್ತೂರು ಚನ್ನಮ್ಮ ಸೋಲಿಸಿದರು. ಬ್ರಿಟೀಷರನ್ನು ಸೋಲಿಸಿ ಕಿತ್ತೂರಿನ ಸ್ವಾಭಿಮಾನವನ್ನು ಗೆಲ್ಲಿಸಿದ ದಿನವೇ ಕಿತ್ತೂರು ಉತ್ಸವ. 2017ರಲ್ಲಿ ಕಿತ್ತೂರು ರಾಣಿ ಉತ್ಸವವನ್ನು ಮೊದಲ ಬಾರಿಗೆ ಆರಂಭಿಸಿದ್ದು ನಮ್ಮ ಸರ್ಕಾರ ಎಂದು ನೆನಪಿಸಿದರು.

ಸ್ವಾಭಿಮಾನಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ ಮತ್ತು ಬಾಳಪ್ಪ ಅವರು ಒಟ್ಟಾಗಿ ಶೌರ್ಯದಿಂದ ಬ್ರಿಟೀಷರನ್ನು ಹಿಮ್ಮೆಟ್ಟಿಸಿದರು. ಬಾಬಾ ಸಾಹೇಬ್ ಪಾಟೀಲರು ಶಾಸಕರಾದ ಬಳಿಕ ಕಿತ್ತೂರು ಉತ್ಸವ ಅತ್ಯಂತ ಸಂಭ್ರಮ ಮತ್ತು ಅರ್ಥಪೂರ್ಣವಾಗಿ ನಡೆಸುತ್ತಿದ್ದಾರೆ. ಇದಕ್ಕಾಗಿ ಶಾಸಕರು ಮತ್ತು ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಟಿಪ್ಪು, ಹೈದರಾಲಿ ಇಬ್ಬರೂ ಬ್ರಿಟೀಷರ ನಿದ್ದೆ ಕೆಡಿಸಿದ್ದರು. ಈ ಇತಿಹಾಸವನ್ನು ಹೇಳಿದ ಕೂಡಲೇ ಸಿದ್ದರಾಮಯ್ಯ ಓಲೈಕೆ ರಾಜಕಾರಣ ಮಾಡುತ್ತಾರೆ ಎಂದು ಅಪಪ್ರಚಾರ ಮಾಡುತ್ತಾರೆ. ‘ಇತಿಹಾಸ ಅರಿಯದವರು ಭವಿಷ್ಯ ರೂಪಿಸಲಾರರು’ ಎನ್ನುವ ಅಂಬೇಡ್ಕರ್ ಅವರ ಮಾತು ಮರೆಯಬಾರದು ಎಂದರು.

ರಾಣಿ ಚನ್ನಮ್ಮನವರ ಐಕ್ಯ ಸ್ಥಳವನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ನಮ್ಮ ಸರ್ಕಾರ. ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರ ರಾಣಿ ಚನ್ನಮ್ಮ ಅವರ ಹೆಸರಿಡುವಂತೆ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ಕೇಂದ್ರ ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ ಎಂದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img