ಅಸಮಾನತೆಯನ್ನು ತೊಲಗಿಸಲು ಪ್ರತಿಯೊಬ್ಬರೂ ಶಿಕ್ಷಿತರಾಗಬೇಕು: ಸಿಎಂ ಸಿದ್ದರಾಮಯ್ಯ

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ವ್ಯಕ್ತಿತ್ವ ರೂಪಿಸಿಕೊಳ್ಳಲು ಶಿಕ್ಷಣ ಪಡೆಯುವುದು ಅಗತ್ಯವಾಗಿದ್ದು, ಸಮಾಜದ ಅಸಮಾನತೆಯನ್ನು ತೊಲಗಿಸಲು ಪ್ರತಿಯೊಬ್ಬರೂ ಶಿಕ್ಷಿತರಾಗಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Advertisement

ಅವರು ಶನಿವಾರ ಜಾಮಿಯಾ ಮಸೀದಿ ಮತ್ತು ಮುಸ್ಲಿಂ ಚಾರಿಟೇಬಲ್ ಥಂಡ್ ಟ್ರಸ್ಟ್ ನಿರ್ವಹಣೆಯ ಜೆ.ಯು ಸಮೂಹ ಸಂಸ್ಥೆಗಳ ವತಿಯಿಂದ ಜೆ.ಯು ಗ್ರೂಪ್ ಆಫ್ ಇನ್‌ಸ್ಟಿಟ್ಯೂಟ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಯಾವುದೇ ಜಾತಿ-ಧರ್ಮಕ್ಕೆ ಸೇರಿದ್ದರೂ, ಸ್ವಾಭಿಮಾನಿ ಬದುಕಿಗೆ ಶಿಕ್ಷಣ ಅತ್ಯಂತ ಮುಖ್ಯ. ಸಾಮಾಜಿಕ ಸಂಕೋಲೆಗಳಿಂದ ಮುಕ್ತರಾಗಲು ಶಿಕ್ಷಣ ಅಗತ್ಯವೆಂದು ಡಾ. ಬಿ.ಆರ್. ಅಂಬೇಡ್ಕರ್ ಹೇಳಿದ್ದಾರೆ. ಪ್ರತಿಯೊಬ್ಬ ಮುಸ್ಲಿಮನೂ ಶಿಕ್ಷಣವಂತನಾಗಬೇಕು. ವ್ಯಕ್ತಿತ್ವ ರೂಪಿಸಿಕೊಳ್ಳಲು ಶಿಕ್ಷಣ ಪಡೆಯುವುದು ಅಗತ್ಯವಾಗಿದ್ದು, ಸಮಾಜದ ಅಸಮಾನತೆಯನ್ನು ತೊಲಗಿಸಲು ಪ್ರತಿಯೊಬ್ಬರೂ ಶಿಕ್ಷಿತರಾಗಲೇಬೇಕು. ಸಂವಿಧಾನ ಅಸ್ತಿತ್ವಕ್ಕೆ ಬಂದ ನಂತರವಷ್ಟೇ ಎಲ್ಲರಿಗೂ ಶಿಕ್ಷಣ ಪಡೆಯುವ ಸಮಾನ ಅವಕಾಶ ಸಾಧ್ಯವಾಯಿತು. ಶಿಕ್ಷಣಕ್ಕೆ ಸರ್ಕಾರ ಹೆಚ್ಚು ಒತ್ತು ನೀಡಿದ್ದು, ಇದಕ್ಕಾಗಿ ಅನುದಾನವನ್ನೂ ನೀಡಲಾಗುವುದು ಎಂದು ಹೇಳಿದರು.

ತಮ್ಮ ಧರ್ಮವನ್ನು ಪಾಲಿಸುತ್ತಾ ಪರ ಧರ್ಮವನ್ನು ಗೌರವಿಸಬೇಕು. ಸಹಬಾಳ್ವೆ, ಸೌಹಾರ್ದತೆಯನ್ನು ಪಾಲಿಸಬೇಕು ಎಂದು ನಮ್ಮ ಸಂವಿಧಾನ ತಿಳಿಸುತ್ತದೆ. ಯಾವುದೇ ಧರ್ಮ ದ್ವೇಷವನ್ನು ಪ್ರಚೋದಿಸುವುದಿಲ್ಲ. ದ್ವೇಷ ರಾಜಕಾರಣ ಮಾಡಬಾರದು. ದ್ವೇಷದಿಂದ ಯಾರ ಮನಸ್ಸನ್ನೂ ಗೆಲ್ಲಲು ಸಾಧ್ಯವಿಲ್ಲ. ಈ ಅರಿವಿಗೆ ಶಿಕ್ಷಣ ಮುಖ್ಯ ಎಂದರು.

ಅಸಮಾನತೆ ಹೋಗಬೇಕೆಂಬ ಕಾರಣದಿಂದ ಗ್ಯಾರಂಟಿಗಳನ್ನು ಜಾರಿಗೆ ತರುತ್ತಿದ್ದಾರೆ. ಸಂವಿಧಾನ ಇದನ್ನು ಒಪ್ಪುತ್ತದೆ. ಅದನ್ನು ನಮ್ಮ ಸರ್ಕಾರ ಮಾಡುತ್ತಿದೆ. ಸಂವಿಧಾನ ತಿಳಿದವರಿಗೆ ಸಮಾಜಮುಖಿ ಕೆಲಸ ಮಾಡಲು ಸಾಧ್ಯ ಎಂದರು.

ಎಲ್ಲರೂ ವಿದ್ಯಾವಂತರಾದರೆ ಭವ್ಯ ಭಾರತ ಕಟ್ಟಬಹುದು, ಸಮ ಸಮುದಾಯ ನಿರ್ಮಿಸಬಹುದು. ಎಲ್ಲರೂ ಮೊದಲು ಭಾರತೀಯರು. ಆಮೇಲೆ ಹಿಂದೂ, ಮುಸ್ಲಿಂ, ಕ್ರೈಸ್ತರು ಎಂದು ಪರಿಗಣಿಸೋಣ. ಎಲ್ಲರೂ ಭಾರತೀಯರಾಗಿ ಭಾರತವನ್ನು ಕಟ್ಟೋಣ. ದ್ವೇಷ ಬಿಟ್ಟು ಪರಸ್ಪರ ಪ್ರೀತಿ ಮಾಡೋಣ ಎಂದು ಮುಖ್ಯಮಂತ್ರಿಗಳು ಕರೆ ನೀಡಿದರು.


Spread the love

LEAVE A REPLY

Please enter your comment!
Please enter your name here