ಹೈಕಮಾಂಡ್ ಒಪ್ಪಿಗೆ ಕೊಟ್ರೆ ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ: ಕೆ.ಎನ್‌ ರಾಜಣ್ಣ

0
Spread the love

ತುಮಕೂರು:- ಹೈಕಮಾಂಡ್ ಒಪ್ಪಿಗೆ ಕೊಟ್ರೆ ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಎಂದು ಸಚಿವ ಕೆ.ಎನ್‌ ರಾಜಣ್ಣ ಹೇಳಿದ್ದಾರೆ.

Advertisement

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯರಿಗೆ ಸಂಪುಟ ಪುನಾರಚನೆ ಮಾಡಲು ಹೈಕಮಾಂಡ್ ಒಪ್ಪಿಗೆ ಕೊಟ್ಟರೆ ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿ ಮುಂದುವರೆಯೋದು ಖಚಿತ. ಇಲ್ಲ ಅಂದರೆ ರಾಜಕೀಯದಲ್ಲಿ ಯಾವುದೇ ಬೆಳವಣಿಗೆ ನಡೆಯಬಹುದು ಎಂದು ರಾಜಣ್ಣ ಪರೋಕ್ಷವಾಗಿ ನವೆಂಬರ್ ಕ್ರಾಂತಿ ಬಗ್ಗೆ ಸುಳಿವು ಕೊಟ್ಟಿದ್ದಾರೆ.

ಎಲ್ಲವೂ ಬಿಹಾರ ಚುನಾವಣೆ ಫಲಿತಾಂಶದ ಬಗ್ಗೆ ನಡೆಯಲಿದೆ. ಅಲ್ಲಿಯವರೆಗೂ ಯಾವುದೇ ಬೆಳವಣಿಗೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯರೇ ಮುಂದುವರಿಯಬಹುದೂ ಅನ್ನೋದನ್ನು ರಾಜಣ್ಣ ಪರೋಕ್ಷವಾಗಿ ಹೇಳಿದ್ದಾರೆ.

ಸಂಪುಟ ಪುನಾರಚನೆ ಆಗಲಿದೆ. ಇನ್ಮುಂದೆ ಗ್ರಾಮ ಪಂಚಾಯತಿ, ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಮೀಸಲಾತಿ ಇರುವಂತೆ. ಓಬಿಸಿಗಳಿಗೆ ಲೋಕಸಭೆ, ವಿಧಾನಸಭೆ ಚುನಾವಣೆಗಳಲ್ಲಿ ಮೀಸಲಾತಿ ಕೊಡಬೇಕು. ಎಸ್ಸಿ-ಎಸ್ಟಿ ಮೀಸಲು ಕ್ಷೇತ್ರ ಇರುವಂತೆ ಓಬಿಸಿ ಮೀಸಲು ಕ್ಷೇತ್ರ ಕೊಡಬೇಕು. ಕೇಂದ್ರ ಸರ್ಕಾರ ಈ ಬಗ್ಗೆ ಗಂಭೀರವಾಗಿ ಚಿಂತಿಸಬೇಕು ಎಂದು ಆಗ್ರಹಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here