ನೆಲಮಂಗಲ:- ಗ್ರಾಮ ಪಂಚಾಯಿತಿ ಸದಸ್ಯನ ಮೇಲೆ ಇಬ್ಬರು ಅಪರಿಚಿತ ವ್ಯಕ್ತಿಗಳಿಂದ ಗುಂಡಿನ ದಾಳಿ ನಡೆದಿರುವ ಘಟನೆ ಇಲ್ಲಿನ ಇಸ್ಲಾಂಪುರ ಗ್ರಾಮದಲ್ಲಿ ಜರುಗಿದೆ.
ಗುಂಡಿನ ದಾಳಿಗೆ ಒಳಗಾದ ಗ್ರಾಮ ಪಂಚಾಯಿತಿ ಸದಸ್ಯನನ್ನು ಕಣೇಗೌಡನಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ಸಲೀಂ ಎಂದು ಗುರುತಿಸಲಾಗಿದೆ. ಸಲೀಂ ಮನೆ ಮುಂದೆ ಬಂದ ಇಬ್ಬರು ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಎರಡು ಗುಂಪುಗಳ ನಡುವೆ ಮಾತನಾಡುವ ವೇಳೆ ಏಕಾಏಕಿ ಗುಂಡಿನ ದಾಳಿ ಮಾಡಿ ಅಪರಿಚಿತರು ಎಸ್ಕೇಪ್ ಆಗಿದ್ದಾರೆ. ಅವರ ಕೈಗೆ ಗಾಯವಾಗಿದ್ದು, ಇತ್ತ ಗಾಯಾಳು ಸಲೀಂ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗ್ತಿದೆ.
ಘಟನೆ ಬಳಿಕ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾದ ಹಿನ್ನೆಲೆ, ನೆಲಮಂಗಲ ಪೊಲೀಸರು ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಬಿಗಿ ಭದ್ರತೆಯಲ್ಲಿ ಶಿಫ್ಟ್ ಮಾಡಿದ್ದಾರೆ. ಇನ್ನೂ ಈ ಘಟನೆಯಿಂದ ಮತ್ತೆ ನೆಲಮಂಗಲ ರೌಡಿಸಂ ಶುರುವಾಯಿತಾ ಎಂಬ ಆತಂಕದಲ್ಲಿ ಜನಸಾಮಾನ್ಯರು ಇದ್ದಾರೆ.



