ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಡಂಬಳ ನಾಕಾದಲ್ಲಿ ಗದಗ ಜಿಲ್ಲಾ ವಾಲ್ಮೀಕಿ ನಾಯಕ ಸೇವಾ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಶ್ರೀ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವವನ್ನು ಕಾನೂನು, ಸಂಸದೀಯ ವ್ಯವಹಾರ, ಪ್ರವಾಸೋದ್ಯಮ, ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಕೆ. ಪಾಟೀಲ ಉದ್ಘಾಟಿಸಿದರು.
ಇದೇ ಸಂದರ್ಭದಲಿ ಚಾಲುಕ್ಯ ಮಲ್ಲಕಂಬ ಅಕಾಡೆಮಿಯಿಂದ ಮಲ್ಲಕಂಬ ಪ್ರದರ್ಶನ ನೆರವೇರಿತು. ಅಕಾಡೆಮಿಯ ಸಂಸ್ಥಾಪಕ ಹಾಗೂ ತರಬೇತುದಾರರಾದ ವಿಜಯ ಎಂ ಅವರನ್ನು ಹಾಗೂ ಮಲ್ಲಕಂಬ ಕ್ರೀಡಾಪಟುಗಳನ್ನು ರೋಣ ಶಾಸಕರಾದ ಜಿ.ಎಸ್. ಪಾಟೀಲ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಫಕ್ಕೀರೇಶ್ವರ ಮಹಾಸ್ವಾಮಿಗಳು ಶಿರಹಟ್ಟಿ, ವಾಲ್ಮೀಕಿ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬೆಳಧಡಿ, ಗದಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಗೌಡ ಪಾಟೀಲ, ನಗರಸಭೆ ಸದಸ್ಯರಾದ ಲಕ್ಷ್ಮೀ ಅನಿಲ ಸಿದ್ದಮ್ಮನಹಳ್ಳಿ, ವಸಂತ ಸಿದ್ದಮ್ಮನಹಳ್ಳಿ, ಬಸವರಾಜ ಕಡೇಮನಿ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಜಿಲ್ಲಾ ಗ್ಯಾರಂಟಿ ಸಮಿತಿಯ ಅಧ್ಯಕ್ಷ ಬಿ.ಬಿ. ಅಸೂಟಿ, ಐ.ಎಸ್. ಪಾಟೀಲ ಸೇರಿದಂತೆ ವಾಲ್ಮೀಕಿ ಸೇವಾ ಸಂಘದ ಪದಾಧಿಕಾರಿಗಳು, ಸಮಾಜದ ಹಿರಿಯರು, ಮುಖಂಡರು ಉಪಸ್ಥಿತರಿದ್ದರು.



