ಇತ್ತೀಚೆಗಷ್ಟೇ ನಟಿ ರಶ್ಮಿಕಾ ಹಾಗೂ ನಟ ವಿಜಯ್ ದೇವರಕೊಂಡ ಎಂಗೇಜ್ ಮೆಂಟ್ ಮಾಡಿದ್ದಾರೆ. ಕೇವಲ ಆಪ್ತರ ಸಮ್ಮುಖದಲ್ಲಿ ಇಬ್ಬರು ಉಂಗುರ ಬದಲಾಯಿಸಿಕೊಂಡಿದ್ದಾರೆ. ಆದರೆ ಇದುವರೆಗೂ ಈ ಬಗ್ಗೆ ವಿಜಯ್ ಅಥವಾ ರಶ್ಮಿಕಾ ಯಾವುದೇ ಮಾಹಿತಿ ಬಿಟ್ಟುಕೊಟ್ಟಿರಲಿಲ್ಲ. ಇದೀಗ ರಶ್ಮಿಕಾ ತಾವು ಎಂಗೇಜ್ ಮೆಂಟ್ ಮಾಡಿಕೊಂಡಿರುವ ಬಗ್ಗೆ ಪರೋಕ್ಷವಾಗಿ ಹೇಳಿಕೊಂಡಿದ್ದಾರೆ.
ಇತ್ತೀಚೆಗೆ ರಶ್ಮಿಕಾ ಮಂದಣ್ಣ ನಟನೆಯ ‘ದಿ ಗರ್ಲ್ಫ್ರೆಂಡ್’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಈ ಚಿತ್ರದ ಸುದ್ದಿಗೋಷ್ಠಿಯಲ್ಲಿ ರಶ್ಮಿಕಾಗೆ ಎಂಗೇಜ್ ಮೆಂಟ್ ಮಾಡಿಕೊಂಡಿರುವ ಬಗ್ಗೆ ಪ್ರಶ್ನೆ ಕೇಳಲಾಗಿದೆ. ‘ನೀವು ಹಾಗೂ ವಿಜಯ್ ದೇವರಕೊಂಡ ಎಂಗೇಜ್ಮೆಂಟ್ ಮಾಡಿಕೊಂಡಿದ್ದೀರಂತೆ ಹೌದಾ’ ಎಂದು ಪ್ರಶ್ನೆ ಮಾಡಲಾಯಿತು. ಇದಕ್ಕೆ ಉತ್ತರಿಸಿದ ರಶ್ಮಿಕಾ ‘ಸಮಯ ಬಂದಾಗ ಹೇಳುತ್ತೇನೆ’ ಎಂದಿದ್ದಾರೆ. ಈ ಮೂಲಕ ತಾವು ಎಂಗೇಜ್ ಮೆಂಟ್ ಮಾಡಿಕೊಂಡಿರುವುದು ಹೌದು ಎಂದು ಪರೋಕ್ಷವಾಗಿ ಹೇಳಿದ್ದಾರೆ.
ಇನ್ನೂ ರಶ್ಮಿಕಾ ಮಂದಣ್ಣ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾಗಳು ಸೂಪರ್ ಹಿಟ್ ಆಗುತ್ತಿವೆ. ಹೀಗಾಗಿ ಸಾಕಷ್ಟು ನಿರ್ಮಾಪಕರು ರಶ್ಮಿಕಾ ಹಿಂದೆ ಬಿದ್ದಿದ್ದಾರೆ. ಇನ್ನೂ ರಶ್ಮಿಕಾ ನಟನೆಯ ‘ದಿ ಗರ್ಲ್ಫ್ರೆಂಡ್’ ಚಿತ್ರದ ಬಗ್ಗೆಯೂ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾದಲ್ಲಿ ದೀಕ್ಷಿತ್ ಶೆಟ್ಟಿ ನಟಿಸಿದ್ದು, ತೆಲುಗು ಜೊತೆಗೆ ಕನ್ನಡ ಮೊದಲಾದ ಭಾಷೆಗಳಲ್ಲಿ ಸಿನಿಮಾ ಬಿಡುಗಡೆ ಆಗುತ್ತಿದೆ.


