ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಪಟ್ಟಣ ಬಳಿ ಅತ್ಯಾಚಾರ ಎಸಗುವ ಉದ್ದೇಶದಿಂದ ಅಪ್ರಾಪ್ತೆಯನ್ನು ಬಲವಂತವಾಗಿ ಕರೆದೊಯ್ಯುವ ವೇಳೆ ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಬಾಲಕಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಜರುಗಿದೆ.
ಪ್ರೀತಿ ಹೆಸರಿನಲ್ಲಿ ಸರ್ಕಾರಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ಬಾಲಕಿ ಹಿಂದೆ ಬಿದ್ದಿದ್ದ ಅಜಯ್ ಎಂಬಾತ ತನ್ನ ಸಹಚರರ ಜೊತೆಗೂಡಿ ಬಾಲಕಿಯನ್ನ ಲೈಂಗಿಕವಾಗಿ ಬಳಸಿಕೊಳ್ಳಲು ಕರೆದೊಯ್ಯುತ್ತಿದ್ದ ಎನ್ನಲಾಗಿದೆ.
ಮೃತಳಾದ ಬಾಲಕಿ ಸರ್ಕಾರಿ ಶಾಲೆಯ 9ನೇ ತರಗತಿಯಲ್ಲಿ ಓದುತ್ತಿದ್ದಳು. ಅವಳ ಜೊತೆ ಹಿಂದೆ ಪ್ರೀತಿ ಸಂಬಂಧ ಬೆಳೆಸಿದ್ದ ಅಜಯ್ ಎಂಬ ಯುವಕ ಮತ್ತು ಅವನ ಸಹಚರರು ಅದ ಇರ್ಫಾನ್, ಮುಬಾರಕ್ ಮತ್ತು ಒಬ್ಬ ಅಪ್ರಾಪ್ತ ಸೇರಿಕೊಂಡು, ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಉದ್ದೇಶದಿಂದ ಬಲವಂತವಾಗಿ ಕರೆದೊಯ್ದಿದ್ದಾರೆ ಎನ್ನಲಾಗಿದೆ.
ಅವರು ಎರಡು ಬೈಕ್‌ಗಳಲ್ಲಿ ತೆರಳುತ್ತಿದ್ದಾಗ, ಹೊಸಕೋಟೆ ಮಾರ್ಗದಲ್ಲಿ ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ, ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಬೈಕ್‌ನಲ್ಲಿದ್ದ ಅಜಯ್ ಹಾಗೂ ಇನ್ನೊಬ್ಬ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಘಟನೆ ಅಕ್ಟೋಬರ್ 24ರಂದು ನಡೆದಿದ್ದರೂ, ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಆ ದಿನ ಶಾಲೆಗೆ ಹೋದ ಬಾಲಕಿ ಮನೆಗೆ ವಾಪಾಸ್ ಬಾರದೆ ಇದ್ದಾಗ ಪೋಷಕರು ಹುಡುಕಾಟ ನಡೆಸಿ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ಪ್ರಕರಣ ದಾಖಲಿಸಿದ್ದರು.
ನಂತರ ಸಂಜೆ ಹೊಸಕೋಟೆ ಪೊಲೀಸರು ಕರೆ ಮಾಡಿ, “ನಿಮ್ಮ ಮಗಳು ಅಪಘಾತದಲ್ಲಿ ಸಾವನ್ನಪ್ಪಿದ್ದಾಳೆ” ಎಂದು ಮಾಹಿತಿ ನೀಡಿದ್ದರು.
ಘಟನೆಯ ತನಿಖೆಯಲ್ಲಿ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಯತ್ನದ ಶಂಕೆ ದೃಢವಾದ ಬಳಿಕ, ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಅಪಹರಣ ಮತ್ತು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಜೈಲಿಗೆ ಕಳುಹಿಸಲಾಗಿದೆ.



