ಅಂಗನವಾಡಿ ಕೇಂದ್ರದ ಉದ್ಘಾಟನೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲಾಧಿಕಾರಿಗಳ ಕಾರ್ಯಾಲಯ ಗದಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ 2023-2024ನೇ ಸಾಲಿನ ಮಹತ್ವಾಕಾಂಕ್ಷಿ ತಾಲೂಕು (ನಗರ) ಯೋಜನೆಯಡಿ ನೂತನ ಅಂಗನವಾಡಿ ಕೇಂದ್ರ ಸಂಖ್ಯೆ 256ರ ಕಟ್ಟಡವನ್ನು ವಾರ್ಡ್ ನಂ. 34ರ ನಂದೀಶ್ವರ ನಗರದಲ್ಲಿ ಮಂಗಳವಾರ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ, ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲರು ಉದ್ಘಾಟಿಸಿದರು.

Advertisement

ಈ ಸಂದರ್ಭದಲ್ಲಿ ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ, ನಗರಸಭಾ ಸದಸ್ಯರು, ಗಣ್ಯರು, ಹಿರಿಯರು, ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here