ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ `ನನ್ನ ಮತ-ನನ್ನ ಹಕ್ಕು’ ವಿಷಯದಲ್ಲಿ ಈಚೆಗೆ ರೋಣದ ಬಿಆರ್ಸಿಯಲ್ಲಿ ರೋಣ ಮತ್ತು ಗಜೇಂದ್ರಗಡ ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ ಜರುಗಿತು. ಇದರಲ್ಲಿ ಪಟ್ಟಣದ ಶ್ರೀ ಅನ್ನದಾನ ವಿಜಯ ವಿದ್ಯಾ ಪ್ರಸಾರಕ ಸಮಿತಿಯ ಬಾಲಿಕೆಯರ ಪ್ರೌಢಶಾಲೆಯ ವಿದ್ಯಾರ್ಥಿನಿ ಶಿವಲೀಲಾ ಸೋಮಗೊಂಡ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ ಎಂದು ಮುಖ್ಯ ಶಿಕ್ಷಕ ಸಂಗಮೇಶ ಹೂಲಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಲೂಕಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದ ಶಿವಲೀಲಾ ಸೋಮಗೊಂಡ ಅವರನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀ ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು, ಶಾಲೆಯ ಚೇರಮನ್ರು, ಮುಖ್ಯೋಪಾಧ್ಯಾಯರು ಮತ್ತು ಸಿಬ್ಬಂದಿಗಳು ಅಭಿನಂದಿಸಿ ಶುಭ ಕೋರಿದ್ದಾರೆ.



