ಹಾಸಿಗೆ, ದಿಂಬು ಕೋರಿ ದರ್ಶನ್ ಅರ್ಜಿ: ಆದೇಶ ಪ್ರಕಟಿಸಿದ ಕೋರ್ಟ್!

0
Spread the love

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್, ತಮಗೆ ಮಲಗಲು ಹೆಚ್ಚುವರಿ ಹಾಸಿಗೆ, ದಿಂಬು ಮತ್ತು ಬೆಡ್​​ಶೀಟ್ ಬೇಕೆಂದು ಕೋರ್ಟ್​​ಗೆ ಮನವಿ ಮಾಡಿದ್ದರು.

Advertisement

ಇನ್ನೂ ಈ ಸಂಬಂಧ ರೇಣುಕಾ ಸ್ವಾಮಿ ಕೊಲೆ ಆರೋಪಿ ದರ್ಶನ್ ಅವರಿಗೆ ತಿಂಗಳಿಗೊಮ್ಮೆ ಹಾಸಿಗೆ, ಬಟ್ಟೆಗಳನ್ನು ಒದಗಿಸುವಂತೆ ನ್ಯಾಯಾಲಯ ಆದೇಶಿಸಿದೆ. ಮತ್ತೊಬ್ಬ ಆರೋಪಿ ಪವಿತ್ರಾ ಅವರಿಗೂ ಇದೇ ಆದೇಶ ಅನ್ವಯ ಆಗಲಿದೆ.

ಇನ್ನೂ ರೇಣುಕಾಸ್ವಾಮಿ ಪ್ರಕರಣದ  ಶೀಘ್ರ ವಿಚಾರಣೆ ಕೋರಿದ ಎಸ್‌ಪಿಪಿ ಅರ್ಜಿಯನ್ನು ಕೋರ್ಟ್‌ ಮಾನ್ಯ  ಮಾಡಿದೆ. ಅ.31 ರಂದು ದೋಷಾರೋಪ ನಿಗದಿಗೆ ಕೋರ್ಟ್ ಸೂಚನೆ ನೀಡುವ ಮೂಲಕ ದರ್ಶನ್‌ಗೆ  ಡಬಲ್‌ ಶಾಕ್‌ ಕೊಟ್ಟಿದೆ.

ದರ್ಶನ್ ಮತ್ತು ಪವಿತ್ರ ಗೌಡ ಸೇರಿದಂತೆ 6 ಜನ ಆರೋಪಿಗಳು ವಿಡಿಯೋ ಕಾನ್ಫರೆನ್ಸ್‌ನಲ್ಲಿ ಹಾಜರಾಗಿದ್ದರೆ ಉಳಿದ ಆರೋಪಿಗಳು ನ್ಯಾಯಾಲಯದಲ್ಲಿ ಖುದ್ದಾಗಿ ಹಾಜರಾಗಿದ್ದರು.ಇದರ ಜೊತೆಗೆ ತಮ್ಮನ್ನು ಆರೋಪದಿಂದ ಕೈಬಿಡುವಂತೆ ಐದನೇ ಆರೋಪಿ ನಂದೀಶ್ ಅರ್ಜಿ ಹಾಕಿದ್ದ, ಆದರೆ ಆ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ.


Spread the love

LEAVE A REPLY

Please enter your comment!
Please enter your name here