ವಿಜಯಸಾಕ್ಷಿ ಸುದ್ದಿ, ಗದಗ: ಇತ್ತೀಚೆಗೆ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳಿಗಾಗಿ ಪ್ರತಿಭಾ ವಿಹಾರ ಅಕಾಡೆಮಿ ನವದೆಹಲಿ ಇವರ ಸಂಯುಕ್ತ ಆಶ್ರಯದಲ್ಲಿ 6ನೇ ವರ್ಷದ ಇಂಟರ್‌ನ್ಯಾಷನಲ್ ಆರ್ಟ್ & ಎಕ್ಸಿಬಿಷನ್ ಹಮ್ಮಿಕೊಳ್ಳಲಾಗಿತ್ತು.
ಸ್ಪರ್ಧೆಯಲ್ಲಿ ರಾಯಲ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿನಿ ಸದಾಫ ಖಾದರಸಾಬ ತಹಸೀಲ್ದಾರ ಪರಿಸರ ಮಾಲಿನ್ಯಕ್ಕೆ ಸಂಬಂಧಿಸಿದ ಚಿತ್ರವನ್ನು ರಚಿಸಿ ಕಲಾಪದಕ ಮತ್ತು ಪ್ರಶಸ್ತಿ ಫಲಕವನ್ನು ಪಡೆದಿದ್ದಾಳೆ. ಈ ವಿದ್ಯಾರ್ಥಿನಿಗೆ ತರಬೇತಿ ನೀಡಿದ ಕಲಾವಿದ ಜಾಕೀರಹುಸೇನ್ ಮತ್ತು ವಿದ್ಯಾರ್ಥಿನಿಗೆ ನಗರದ ಎಂ.ಕೆ.ಕೆ. ಫೌಂಡೇಶನ್ ಟ್ರಸ್ಟ್ ಅಧ್ಯಕ್ಷರು, ಸರ್ವ ಸದಸ್ಯರು, ಸಿಬ್ಬಂದಿ ವರ್ಗ ಹಾಗೂ ರಾಯಲ್ ಇಂಗ್ಲಿಷ್ ಮೀಡಿಯಂ ಶಾಲಾ ಸಿಬ್ಬಂದಿಗಳು ಹಾರ್ದಿಕ ಅಭಿನಂದನೆ ತಿಳಿಸಿದ್ದಾರೆ.



