ವಿಜಯಸಾಕ್ಷಿ ಸುದ್ದಿ, ಶಿಕಾರಿಪುರ: ಶಿಕಾರಿಪುರ ತಾಲೂಕಿನ ತಪೋಕ್ಷೇತ್ರ ಕಡೆನಂದಿಹಳ್ಳಿ ಶ್ರೀ ಮಳೆಮಲ್ಲೇಶ್ವರಸ್ವಾಮಿ ಜಾಗೃತ ಸ್ಥಳ ಶ್ರೀ ಗುರು ರೇವಣಸಿದ್ಧೇಶ್ವರ ಪುಣ್ಯಾಶ್ರಮದಲ್ಲಿ ನವೆಂಬರ್ 5ರಂದು ಸಂಜೆ 7 ಗಂಟೆಗೆ 12ನೇ ವರ್ಷದ ಕಾರ್ತಿಕ ದೀಪೋತ್ಸವ ನಡೆಯಲಿದೆ. ಕಡೆನಂದಿಹಳ್ಳಿ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳ ಸಮ್ಮುಖದಲ್ಲಿ ನಡೆಯುವ ಸಮಾರಂಭದಲ್ಲಿ ವಿವಿಧ ಮಠಗಳ ಶಿವಾಚಾರ್ಯರು, ಗಣ್ಯರು ಭಾಗವಹಿಸುವರು.
ಅಂದು ಬೆಳಿಗ್ಗೆ ಶ್ರೀ ಜಗದ್ಗುರು ರೇಣುಕಾಚಾರ್ಯರಿಗೆ, ಶ್ರೀ ಸೋಮೇಶ್ವರ ಮಹಾಲಿಂಗಕ್ಕೆ, ಕ್ಷೇತ್ರನಾಥ ಶ್ರೀ ಮಳೆಮಲ್ಲೇಶ್ವರ ಸ್ವಾಮಿಗೆ, ಪರಿವಾರ ದೈವಗಳಿಗೆ ವಿಶೇಷ ರುದ್ರಾಭಿಷೇಕ, ಶಿವಾಷ್ಟೋತ್ತರ, ಮಹಾಮಂಗಳಾರತಿ ಪೂಜಾ ಕಾರ್ಯಕ್ರಮಗಳು ಜರುಗುತ್ತವೆ.
ಸಂಜೆ 5 ಗಂಟೆಗೆ 2026ರ ಜನವರಿ 19-20ರಂದು ನಡೆಯಲಿರುವ ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಪರಂಪರೆ ಜಾತ್ರೋತ್ಸವ ಮತ್ತು ಶ್ರೀ ರಂಭಾಪುರಿ ಜಗದ್ಗುರು ರೇವಣಸಿದ್ಧೇಶ್ವರ ರಾಷ್ಟ್ರೀಯ ಪ್ರಶಸ್ತಿ ಪ್ರದಾನ, ಧಾರ್ಮಿಕ ಸಾಂಸ್ಕೃತಿಕ ಸಮಾರಂಭದ ಪೂರ್ವಭಾವಿ ಸಭೆ ನಡೆಯಲಿದೆ. ಸಮಸ್ತ ಸದ್ಭಕ್ತರು ಈ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶ್ರೀ ಮಠದ ಪ್ರಕಟಣೆ ತಿಳಿಸಿದೆ.



