ಚಿಕ್ಕಮಗಳೂರು: ಶೃಂಗೇರಿ ತಾಲೂಕಿನ ಕೆರೆಮನೆ ಗ್ರಾಮದಲ್ಲಿ ಕಾಡಾನೆ ದಾಳಿ ನಡೆದಿದ್ದು, ಇಬ್ಬರು ರೈತರು ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮೃತ ರೈತರನ್ನು ಹರೀಶ್ (44) ಮತ್ತು ಉಮೇಶ್ (40) ಎಂದು ಗುರುತಿಸಲಾಗಿದೆ. ಇಬ್ಬರು ಸೇರಿ ಕೊಟ್ಟಿಗೆಗೆ ಸೊಪ್ಪು ತರಲು ತೆರಳಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಈ ಘಟನೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿದ್ದು, ಸ್ಥಳಕ್ಕೆ ಶೃಂಗೇರಿ ಪೊಲೀಸರು ಮತ್ತು ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆಯ ನಂತರ ಗ್ರಾಮಸ್ಥರು ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಒದಗಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹ ವ್ಯಕ್ತಪಡಿಸಿದ್ದಾರೆ.



