ಬೀದರ್: ಔರಾದ್ ತಾಲೂಕಿನ ಹೆಡಗಾಪುರ ಗ್ರಾಮ ಪಂಚಾಯತಿಯ ಪಿಡಿಒ ಮಹಾಲಕ್ಷ್ಮಿ ಅವರನ್ನು ಅಧಿಕಾರ ದುರುಪಯೋಗ ಹಾಗೂ ಕರ್ತವ್ಯ ಲೋಪದ ಆರೋಪದ ಮೇರೆಗೆ ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಜಿಲ್ಲಾ ಪಂಚಾಯತ್ ಸಿಇಒ ಡಾ. ಗಿರೀಶ್ ಬದೋಲೆ ಅವರು ಅಮಾನತು ಆದೇಶ ಹೊರಡಿಸಿದ್ದು, ಪಿಡಿಒ ಅವರು ಪಂಚಾಯತಿ ಅಧ್ಯಕ್ಷರ ಅಧಿಕಾರ ಚಲಾವಣೆ ಮಾಡಿದ ಜೊತೆಗೆ, ನಿಯಮಿತವಾಗಿ ಸಾಮಾನ್ಯ ಸಭೆ ನಡೆಸದೆ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಣೆಯಲ್ಲಿ ತೊಂದರೆ ಉಂಟುಮಾಡಿದ ಆರೋಪ ಸಾಬೀತಾದ ಹಿನ್ನೆಲೆ, ಇಲಾಖಾ ವಿಚಾರಣೆ ಬಾಕಿಯಿರುವುದರಿಂದ ಪಿಡಿಒ ಮಹಾಲಕ್ಷ್ಮಿ ಅವರನ್ನು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ.



