ಕರ್ನಾಟಕ ರಾಜ್ಯೋತ್ಸವಕ್ಕೆ ಕನ್ನಡದಲ್ಲಿ ಶುಭಾಶಯ ತಿಳಿಸಿದ ಪ್ರಧಾನಿ ನರೇಂದ್ರ ಮೋದಿ

0
Spread the love

ನವದೆಹಲಿ: ರಾಜ್ಯದೆಲ್ಲೆಡೆ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದ್ದಾರೆ. ಇತ್ತ ಪ್ರಧಾನಿ ಮೋದಿ ಅವರು ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ್ದು,

Advertisement

‘ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ.

ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ’ ಎಂದು ಎಕ್ಸ್​ ಸಂದೇಶದಲ್ಲಿ ಮೋದಿ ಉಲ್ಲೇಖಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here