ಚಾಮರಾಜನಗರ: ಬೈಕ್ ಗೆ KSRTC ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಸಂತೇಮರಳ್ಳಿ ಗ್ರಾಮದಲ್ಲಿ ಜರುಗಿದೆ.
Advertisement
ಚಾಮರಾಜನಗರ ತಾಲೂಕಿನ ಮೂಡಲ ಅಗ್ರಹಾರ ಗ್ರಾಮದ ನಿವಾಸಿ ನಾಗೇಶ್ ಬಿನ್ ರಾಜಪ್ಪ(60) ಮೃತ ವ್ಯಕ್ತಿ. ಸಂತೇಮರಳ್ಳಿ ಗ್ರಾಮದ ಸರ್ಕಲ್ ಬಳಿ ಕೆ.ಎಸ.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ತೀವ್ರ ರಕ್ತಸ್ರಾವದಿಂದ ಸವಾರ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಸಂತೇಮರಳ್ಳಿ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಮೃತ ದೇಹವನ್ನು ಸಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.


