ದೇವನಹಳ್ಳಿ: ಬೆಂಗಳೂರು ಹೈದ್ರಾಬಾದ್ ಹೆದ್ದಾರಿ ರಸ್ತೆಯಲ್ಲಿ ಟಿಪ್ಪರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ದೇವನಹಳ್ಳಿ ಪಟ್ಟಣದ ಹೊರವಲಯದಲ್ಲಿನ ರಾಣಿ ಕ್ರಾಸ್ ಬಳಿ ಈ ಘಟನೆ ನಡೆದಿದ್ದು,
Advertisement
ಕೋರಮಂಗಲ ಗ್ರಾಮದ ಕಿರಣ್(35) ಎಂಬಾತ ಸಾವನ್ನಪ್ಪಿದ ದುರ್ಧೈವಿಯಾಗಿದ್ದು, ಕೆಲಸ ಮುಗಿಸಿಕೊಂಡು ಮನೆಗೆ ತೆರಳೋ ವೇಳೆ ಈ ದುರ್ಘಟನೆ ನಡೆದಿದೆ. ಅಪಘಾತ ನಂತರ ಟಿಪ್ಪರ್ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದು,
ಅಪಘಾತದಲ್ಲಿ ಬೈಕ್ ಸಂಪೂರ್ಣ ನಜ್ಜು ಗುಜ್ಜಾಗಿದೆ. ಕಿರಣ್ ಮೃತದೇಹವನ್ನು ದೇವನಹಳ್ಳಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಕೆಂಪೇಗೌಡ ಏರ್ಪೋರ್ಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.


