ಧಾರವಾಡ: ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಸಂಸ್ಥೆಗಳ ಕಾರ್ಯಕ್ರಮಗಳಿಗೆ ಅನುಮತಿ ಕಡ್ಡಾಯಗೊಳಿಸಿರುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ತಡೆಯಾಜ್ಞೆಯನ್ನು ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಮಂಗಳವಾರ ಧಾರವಾಡದ ಹೈಕೋರ್ಟ್ ದ್ವಿಸದಸ್ಯ ಪೀಠದಲ್ಲಿ ನಡೆಯಿತು. ವಿಚಾರಣೆ ಅಂತ್ಯದಲ್ಲಿ ಪೀಠ ತೀರ್ಪನ್ನು ಕಾಯ್ದಿರಿಸಿದೆ.
ಹೈಕೋರ್ಟ್‌ನ ಏಕಸದಸ್ಯ ಪೀಠದ ತೀರ್ಪು ತೆರವುಗೊಳಿಸುವಂತೆ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿತ್ತು. ಈ ಕುರಿತು ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ಮತ್ತು ನ್ಯಾಯಮೂರ್ತಿ ಗೀತಾ ಕೆ.ಬಿ. ಅವರನ್ನೊಳಗೊಂಡ ಪೀಠದಲ್ಲಿ ಸುಮಾರು ಒಂದು ಗಂಟೆ ಕಾಲ ವಾದ–ಪ್ರತಿವಾದ ನಡೆಯಿತು.ಸುಮಾರು ಒಂದು ಗಂಟೆ ಕಾಲ ನಡೆದ ವಾದ ಪ್ರತಿವಾದದ ಬಳಿಕ ತೀರ್ಪು ಕಾಯ್ದಿರಿಸಿ ಪೀಠ ಆದೇಶಿಸಿದೆ.
ಪಾರ್ಕ್, ಮೈದಾನ ಎಲ್ಲವೂ ಸರ್ಕಾರದ ಸ್ವತ್ತೆಂದು ಭಾವಿಸಬಾರದು. ಮೈದಾನದಲ್ಲಿ ಕ್ರಿಕೆಟ್ ಆಡಲೂ ಅನುಮತಿ ಬೇಕೆಂಬಂತೆ ನಿಯಮ ತರಲಾಗಿದೆ. ಪೊಲೀಸ್ ಕಾಯ್ದೆಯ ಪ್ರಕಾರ ಕ್ರಮ ಕೈಗೊಳ್ಳುವ ಅಧಿಕಾರ ಜಿಲ್ಲಾ ದಂಡಾಧಿಕಾರಿಗೆ ಮಾತ್ರವಿದೆ. ಏಕಸದಸ್ಯ ಪೀಠದಲ್ಲೇ ತಡೆಯಾಜ್ಞೆ ತೆರವಿಗೆ ಅರ್ಜಿ ಸಲ್ಲಿಸಬಹುದಿತ್ತು,
ಮೇಲ್ಮನವಿಗೆ ಅಷ್ಟೇ ಸರ್ಕಾರ ಬಂದುಕೊಂಡಿದೆ ಎಂದು ಪ್ರತಿವಾದಿ ಪುನಶ್ಚೇತನ ಸೇವಾ ಸಂಸ್ಥೆ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ವಾದಿಸಿದರು. ಸರ್ಕಾರ ಹಾಗೂ ಪುನಶ್ಚೇತನ ಸೇವಾ ಸಂಸ್ಥೆ ಪರ ವಕೀಲರ ವಾದ ಆಲಿಸಿದ ನಂತರ ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಕಾಯ್ದಿರಿಸಿದೆ. ನವೆಂಬರ್ 7ರಂದು ಈ ಕುರಿತು ಮುಂದಿನ ವಿಚಾರಣೆ ನಡೆಯಲಿದೆ.


