ಬೆಂಗಳೂರು:- ಮದುವೆ ವೇಳೆ ಕಾರಿಗಾಗಿ ಬಿಜೆಪಿ ಸಂಸದ ಪತ್ರ ಬರೆದಿದ್ದರು ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತೇಜಸ್ವಿ ಸೂರ್ಯ ಸ್ಪಷ್ಟನೆ ನೀಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಒಂದು ವರ್ಷದ ಹಿಂದೆ ಸರ್ಕಾರದ ಕಾರ್ಯದರ್ಶಿಗೆ ಪತ್ರ ಬರೆದಿದ್ದೆ. ಹಿಂದೆ ನನಗೆ ಕೊಟ್ಟಿದ್ದ ಕಾರು ಒಂದು ಲಕ್ಷ ಓಡಿದೆ. ಕ್ಷೇತ್ರ ಕೆಲಸಕ್ಕೆ ಓಡಾಡಲು ಕಾರು ಬೇಕಿದೆ ಅಂತ ಕೇಳಿದ್ದೆ. ಅದನ್ನ ಬಿಟ್ಟು ನನಗೆ ಯಾರು ಹೆಣ್ಣು ಕೊಡಲ್ಲ, ಕಾರು ಕೊಡಿ ಅಂತ ಕೇಳಿಲ್ಲ. ಇದು ಎಲ್ಲಾ ಸಂಸದರಿಗೂ ಕೊಡಬೇಕಿರೋ ನಿಯಮ. ಈ ಪತ್ರವನ್ನ ಬಿಡುಗಡೆ ಮಾಡುತ್ತೇನೆಂದು ಹೇಳಿದ್ದರು. ನಾನೇ ರಿಲೀಸ್ ಮಾಡುತ್ತಿದ್ದೇನೆ ಎಂದು ತೇಜಸ್ವಿ ಸೂರ್ಯ ತಿರುಗೇಟು ನೀಡಿದರು.
ಟೆಕ್ನಿಕಲ್ ವಿಚಾರಗಳ ಬಗ್ಗೆ ಡಿಕೆ ಮಾತನಾಡಲ್ಲ. ವೈಯಕ್ತಿಕ ನಿಂದನೆ ಆಗುವ ಕೆಲಸ ಆಗ್ತಿದೆ. ಮದುವೆ ಆಗ್ತೀನಿ ಅಂತ ಕಾರು ಕೇಳಿಲ್ಲ. ಒಂದು ಲಕ್ಷ ಕಿಮೀ ಕಾರು ಕಂಪ್ಲೀಟ್ ಆಗಿದೆ. ಆ ಕಾರಣಕ್ಕಾಗಿ ನಾನು ಕಾರು ಕೇಳಿದ್ದೆ. ಕಾರಿಗೆ ಎಲಿಜಿಬಿಲಿಟಿ ಮದುವೆ ವಿಚಾರ ಅಲ್ಲ. ಸಾಗರ್ ಖಂಡ್ರೆಯಂತಹ ಬ್ಯಾಚುಲರ್‌ಗೆ ಕೂಡ ಕಾರು ಕೊಟ್ಟಿದ್ದಾರೆ. ಕಾನೂನು ಪ್ರಕಾರ ಕೊಡಲು ಅವಕಾಶ ಇದೆ ಎಂದರು.


