ವಿಜಯಸಾಕ್ಷಿ ಸುದ್ದಿ, ಗದಗ: ಗದಗ ತಾಲೂಕಿನಲ್ಲಿ 2025-26ನೇ ಸಾಲಿನ ರಾಷ್ಟ್ರೀಯ ಜಾನುವಾರು ಆರೋಗ್ಯ ಮತ್ತು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ 8ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನವು ನ. 3ರಿಂದ ಡಿ. 2ರವರೆಗೆ ನಡೆಯಲಿದ್ದು, ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಸೋಮವಾರ ಹುಲಕೋಟಿಯಲ್ಲಿ ಉಚಿತ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು.
Advertisement
ಈ ಸಂದರ್ಭದಲ್ಲಿ ಗದಗ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಸಿದ್ದು ಪಾಟೀಲ, ಪಶು ಸಂಗೋಪನಾ ಇಲಾಖೆಯ ಗದಗ ತಾಲೂಕಿನ ಪಶು ವೈದ್ಯಾಧಿಕಾರಿಗಳು ಮುಂತಾದವರಿದ್ದರು.


