ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ಸರ್ಕಾರದ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ರಘು ಕೊಪ್ಪರ ಅವರ ಸಾಧನೆಯನ್ನು ಗುರುತಿಸಿ ಆಚಾರ್ಯತ್ರಯರ ಜಯಂತಿ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು.
ಈ ಕಾರ್ಯಕ್ರಮವನ್ನು ಕಂದಾಯ ಸಚಿವರಾದ ಕೃಷ್ಣಭೈರೇಗೌಡ ಶುಕ್ರವಾರ ಬೆಂಗಳೂರಿನಲ್ಲಿ ಉದ್ಘಾಟಿಸುವರು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಶಾಸಕರಾದ ಆರ್.ವಿ. ದೇಶಪಾಂಡೆ, ವಿಶ್ವಾಸ ವೈದ್ಯ, ಮಾಜಿ ಶಾಸಕ ಯು.ಬಿ. ವೆಂಕಟೇಶ್, ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಎಸ್. ರಘುನಾಥ ಪಾಲ್ಗೊಳ್ಳಲಿದ್ದಾರೆ.
ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ಪತ್ರಿಕೆಯಲ್ಲಿ ಕಳೆದ ಎಂಟು ವರ್ಷಗಳಿಂದ ರಘು ಕೊಪ್ಪರ ಕಾರ್ಯನಿರ್ವಹಿಸುತ್ತಿದ್ದು, ಗದಗ ಮತ್ತು ಕೊಪ್ಪಳ ಜಿಲ್ಲೆಯ ಗ್ರಾಮೀಣ ಹಾಗೂ ನಗರಗಳ ಉತ್ತಮ ವರದಿಗಾರಿಕೆಗಾಗಿ ಈ ಸನ್ಮಾನ ಸಂದಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ತೆರಿಗೆ ಸಲಹೆಗಾರರಾದ ಹರೀಶ್ ಕೊಪ್ಪರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


