ಬೆಂಗಳೂರು: ನವೆಂಬರ್ 14 ರಂದು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಗುವ ಸಾಧ್ಯತೆ ಇದೆ. ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿಯೂಟ ನೀಡಲು ತೀರ್ಮಾನಿಸಿದ್ದು, ನವೆಂಬರ್ 14 ಮಕ್ಕಳ ದಿನಾಚರಣೆದಂದು ಸರ್ಕಾರದಿಂದ ಅಧಿಕೃತ ಘೋಷಣೆಯಾಗುವ ಸಾಧ್ಯತೆಗಳಿವೆ.
ರಾಜ್ಯದಲ್ಲಿದ್ದಾರೆ ಸುಮಾರು ಮೂರು ಲಕ್ಷಕ್ಕೂ ಅಧಿಕ ಸರ್ಕಾರಿ ಪಿಯು ವಿದ್ಯಾರ್ಥಿಗಳಿದ್ದಾರೆ. ಗ್ರಾಮೀಣ ಭಾಗದಲ್ಲೇ ಅತಿ ಹೆಚ್ಚು ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ವ್ಯಾಸಂಗ ಮಾಡ್ತಿದ್ದಾರೆ. ದೂರದ ಊರುಗಳಿಂದ ಕಾಲೇಜಿಗೆ ಬರುವ ಪಿಯು ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿಯೂಟ ಯೋಜನೆ ವಿಸ್ತರಣೆ ಆದ್ರೆ ಬಹಳಷ್ಟು ಸಹಾಯಕವಾಗಲಿದೆ.ಈ ಬಗ್ಗೆ ಶಿಕ್ಷಣ ಇಲಾಖೆ ಈಗಾಗಲೇ ಇಲಾಖೆಯಿಂದ ಸರ್ಕಾರಿ ಪದವಿ ಪೂರ್ವ ವಿದ್ಯಾರ್ಥಿಗಳ ಸಂಖ್ಯೆ ಮಾಹಿತ ಪಡೆದುಕೊಂಡಿದೆ.
ಈಗಾಗಲೇ 10ನೇ ತರಗತಿಯ ವರೆಗೆ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಮಧ್ಯಾಹ್ನದ ಬಿಸಿ ಊಟ ಸಿಗುತ್ತಿದೆ. ಇದೀಗ ಹೊಸದಾಗಿ ಪಿಯೂ ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿ ಊಟ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.



