ಕಳ್ಳರ ಬಗ್ಗೆ ಇರಲಿ ಎಚ್ಚರ: ಮನೆಗೆ ಹೀಗೂ ಎಂಟ್ರಿ ಕೊಡ್ತಾರೆ ಹುಷಾರ್!

0
Spread the love

ಬೆಂಗಳೂರು:- ಕಾಲ ಕಳೆದಂತೆ ಕಳ್ಳರು ಕೂಡ ತರಾವರಿ ಐಡಿಯಾ ಉಪಯೋಗಿಸಿ ಕಳ್ಳತನ ದಾರಿ ಹಿಡಿದಿದ್ದಾರೆ. ಅದೇ ರೀತಿಯ ಪ್ರಕರಣ ಇದೀಗ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

Advertisement

ಆಹ್ವಾನ ಪತ್ರಿಕೆ ಕೊಡುವ ನೆಪದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ ನಡೆಸಿರುವ ಘಟನೆ ಹೊರವಲಯದ ಆನೇಕಲ್ ತಾಲೂಕಿನ ನೆರಳೂರು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ರವಿಕುಮಾರ್ ಮನೆಯಲ್ಲಿ ಖತರ್ನಾಕ್ ದಂಪತಿಯಿಂದ ಈ ದರೋಡೆ ನಡೆದಿದೆ.

ರವಿಕುಮಾರ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಬುಧವಾರ ಸಹ ಕೆಲಸಕ್ಕೆ ಎಂದು ಹೋಗಿದ್ದಾಗ ಮನೆಯಲ್ಲಿ ರವಿಕುಮಾರ್ ಪತ್ನಿ ನಾಗವೇಣಿ ಒಬ್ಬರೇ ಇದ್ದರು. ಮನೆಯಲ್ಲಿ ಒಬ್ಬರೇ ಇರುವುದನ್ನು ಗಮನಿಸಿದ ಖತರ್ನಾಕ್ ಜೋಡಿ ಇನ್ವಿಟೇಶನ್ ಕಾರ್ಡ್ ಕೊಡುವ ನೆಪದಲ್ಲಿ ಮನೆ ಒಳಗೆ ಬಂದು ಕುಡಿಯಲು ನೀರು ಕೇಳಿದ್ದಾರೆ. ನೀರು ತರಲೆಂದು ಅಡುಗೆ ಮನೆಗೆ ಹೋದ ನಾಗವೇಣಿಯನ್ನು ಪುರುಷ ಕೈಕಾಲು ಕಟ್ಟಿ ಹಾಕಿ ಕೂಡಿ ಹಾಕಿದ್ದಾರೆ. ನಂತರ ಚಾಕು ಇಟ್ಟು ಬೀರುವಿನ ಲಾಕರ್ ಕೀ ಪಡೆದು ಸುಮಾರು 200 ಗ್ರಾಂ ಚಿನ್ನಾಭರಣ ಕದ್ದು ಅಲ್ಲಿಂದ ಜೋಡಿ ಎಸ್ಕೇಪ್ ಆಗಿದ್ದಾರೆ.

ಬಳಿಕ ನಾಗವೇಣಿ ಸ್ನೇಹಿತರಿಗೆ ಕರೆ ಮಾಡಿ ತಿಳಿಸಿದಾಗ ಕೂಡಲೇ ಅತ್ತಿಬೆಲೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್‌ಪಿ ಸಿ ಕೆ ಬಾಬಾ ಮತ್ತು ಅಡಿಷನಲ್ ಎಸ್ಪಿ ವೆಂಕಟೇಶ್ ಪ್ರಸನ್ನ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here