ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ ಅವರು ನವೆಂಬರ್ 8ರಂದು ಬೆಳಿಗ್ಗೆ 5.30 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು ಬೆಳಿಗ್ಗೆ 7.30 ಗಂಟೆಗೆ ಗದಗಿಗೆ ಆಗಮಿಸುವರು. ಅದೇ ದಿನ ಬೆಳಿಗ್ಗೆ 10 ಗಂಟೆಗೆ ಗದಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು ಎಂದು ಪ್ರಕಟಣೆ ತಿಳಿಸಿದೆ.



