ಆಂಧ್ರಪ್ರದೇಶ:- ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಬಾಪಟ್ಲಾ ಎಂಬಲ್ಲಿ ಜರುಗಿದೆ.
Advertisement
ಬೈಕ್ ಸವಾರ ವೇಗವಾಗಿ ಬಂದು ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ ಯುವಕರು ರಕ್ತಸ್ರಾವದಿಂದ ನರಳಾಡುತ್ತ ರಸ್ತೆಯಲ್ಲಿ ಬಿದ್ದಿದ್ದರು. ತಕ್ಷಣ ಸ್ಥಳೀಯರು ಸ್ಥಳಕ್ಕೆ ಧಾವಿಸಿ, ಯುವಕರಿಬ್ಬರನ್ನು ಆಸ್ಪತ್ರೆ ದಾಖಲಿಸಿದ್ದಾರೆ. ಆದರೆ ಯುವಕರ ಪ್ರಾಣ ಸ್ಥಳದಲ್ಲಿ ಹೋಗಿದೆ. ಅಪಘಾತದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದೆ.
ಅಪಘಾತಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದ್ದು, ಪೋಲೀಸರು ಲಾರಿ ಚಾಲಕನಿಗಾಗಿ ಶೋಧ ಕೈಗೊಂಡಿದ್ದಾರೆ.


