ರಾಯಚೂರು: ಮಸ್ಕಿ ತಾಲೂಕಿನ ಹಳ್ಳಿಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.
Advertisement
ವೈದ್ಯಕೀಯ ಪರೀಕ್ಷೆಯ ವೇಳೆ ಈ ವಿಚಾರ ದೃಢಪಟ್ಟಿದೆ. ಈ ಕುರಿತು ಪೊಲೀಸರು ಪೋಕ್ಸೋ ಕೇಸ್ ದಾಖಲಿಸಿಕೊಂಡು, ಆರೋಪಿಯಾಗಿರುವ 25 ವರ್ಷದ ಯುವಕನನ್ನು ಬಂಧಿಸಿದ್ದಾರೆ. ಯುವಕ ವಿದ್ಯಾರ್ಥಿನಿಯನ್ನ ಪುಸಲಾಯಿಸಿ ಕರೆದೊಯ್ದಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು. ಘಟನೆ ನಂತರ ಪೊಲೀಸರು ಇಬ್ಬರನ್ನೂ ಪತ್ತೆಹಚ್ಚಿ ಠಾಣೆಗೆ ಕರೆತಂದಿದ್ದರು.
ವಿದ್ಯಾರ್ಥಿನಿಯನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆಕೆ ಗರ್ಭಿಣಿಯಾಗಿರುವುದು ದೃಢವಾದ ಹಿನ್ನೆಲೆಯಲ್ಲಿ, ಆರೋಪಿಯನ್ನು ಜೈಲಿಗಟ್ಟಿದ್ದು, ವಿದ್ಯಾರ್ಥಿನಿಯನ್ನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.


