ದಾವಣಗೆರೆ:- ಚನ್ನಗಿರಿ ತಾಲೂಕಿನ ಸೂಳೆಕೆರೆ ಬಳಿಯ ಹೊಸೂರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಭದ್ರಾ ನಾಲೆಗೆ ಪಲ್ಟಿಯಾಗಿ, ಇಬ್ಬರು ಸಾವನ್ನಪ್ಪಿದ ಘಟನೆ ಜರುಗಿದೆ.
Advertisement
ಸಿದ್ದೇಶ್ (38), ಮಲ್ಲಿಕಾರ್ಜುನ್ (27) ಮೃತರು. ಇವರು ದಾವಣಗೆರೆ ಮೂಲದವರಾಗಿದ್ದಾರೆ. ಕಾರಿನಲ್ಲಿ ಆರು ಜನ ಮಂಗಳೂರು ಬಳಿಯ ಕೊರಗಜ್ಜನ ದೇವಸ್ಥಾನಕ್ಕೆ ಹೋಗಿ, ವಾಪಸ್ ಆಗುತ್ತಿದ್ದಾಗ ಈ ಅಪಘಾತ ನಡೆದಿದೆ. ಚಾಲಕ ನಿದ್ರೆ ಮಂಪರಿನಲ್ಲಿ, ಕಾರು ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ.
ಕಾರು ಹಾಗೂ ಮೃತದೇಹಗಳನ್ನು ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದಾರೆ. ಸಂತೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


