ಕೊಪ್ಪಳ:- ಅಪ್ರಾಪ್ತೆ ತಂಗಿಯನ್ನು ಪಾಪಿ ಅಣ್ಣನೋರ್ವ ಗರ್ಭಿಣಿ ಮಾಡಿರುವ ಆಘಾತಕಾರಿ ಘಟನೆ ಕೊಪ್ಪಳದಲ್ಲಿ ಜರುಗಿದೆ.
Advertisement
ತಾಲೂಕಿನ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 17 ವರ್ಷದ ಅಪ್ರಾಪ್ತ ತಂಗಿಯನ್ನು 21 ವರ್ಷದ ಯುವಕ ಗರ್ಭಿಣಿ ಮಾಡಿದ್ದಾನೆ. ಹೊಟ್ಟೆನೋವು ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕಿಯ ವೈದ್ಯಕೀಯ ಪರೀಕ್ಷೆ ವೇಳೆ ಈ ಘಟನೆ ಬಹಿರಂಗವಾಗಿದೆ.
ನಂತರ ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಕೊಪ್ಪಳ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.


