ದಾಸರಲ್ಲಿ ಶ್ರೇಷ್ಠರು ಕನಕದಾಸರು: ಶಾಸಕ ಮಹೇಶ ಟೆಂಗಿನಕಾಯಿ

0
Spread the love

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನ ಬಾಡ ಗ್ರಾಮದಲ್ಲಿ ಕನಕದಾಸರು ಜನಿಸಿದರು. ತಾಯಿ ಬಚ್ಚಮ್ಮ, ತಂದೆ ಭರಮಗೌಡರು. ಯುದ್ಧದಲ್ಲಿ ಸೋತು ಮನನೊಂದು, ದೈವ ವಾಣಿ ಮೂಲಕ ದೈವ ದಾಸರಾಗಿ ಉಡುಪಿಯಲ್ಲಿ ಶ್ರೀ ಕೃಷ್ಣನನ್ನು ಆರಾಧಿಸಿ ಒಲಿಸಿಕೊಂಡು ಕೃಷ್ಣನ ಭಕ್ತರಾದವರು ಕನಕದಾಸರು ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

Advertisement

ಶನಿವಾರ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ತಾ.ಪಂ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ದಾಸಶ್ರೇಷ್ಠ ಶ್ರೀ ಕನಕದಾಸ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಸಮಾಜದ ಸೇವಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಶರಣು ಅಣ್ಣಿಗೇರಿ ಉಪನ್ಯಾಸ ನೀಡಿದರು. ಶಾಸಕರಾದ ಎನ್.ಎಚ್. ಕೋನರಡ್ಡಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಸಲ್ಲಿಸಿದರು.

ಹುಬ್ಬಳ್ಳಿ ನಗರ ತಹಸೀಲ್ದಾರ ಮಹೇಶ ಗಸ್ತೆ, ಗ್ರಾಮೀಣ ತಹಸೀಲ್ದಾರ ಜೆ.ಬಿ. ಮಜ್ಜಗಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಆರ್.ವೈ. ಹೊಸಮನಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ನಾಗರತ್ನಾ ಕ್ಯಾಸನೂರ, ಹುಬ್ಬಳ್ಳಿ ನಗರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಬ್ದುಲ್ ಬೋಲಾಬಾಯಿ, ಹುಬ್ಬಳ್ಳಿ ನಗರ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಂ. ಪಡ್ನೇಶಿ, ಹುಬ್ಬಳ್ಳಿ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬಮ್ಮಕ್ಕನವರ್, ಸಮಾಜದ ಮುಖಂಡರಾದ ಬಸವರಾಜ ಬೋರಣ್ಣವರ, ಮಂಜುನಾಥ ಗೊಜನೂರ, ವೀರನಾರಾಯ ಅರ್ಜಿ, ಈಶ್ವರ ಹೊಳೆಮನ್ನವರ, ಪಾರ್ವತಿ, ಆರ್.ಜಿ. ಮೇಟಿ, ಸಂಜೀವ ಧುಮಕ್ಕನಾಳ, ಶೋಭಾ ಬಳ್ಳಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ಕೀರ್ತನೆಗಳ ರಚನೆಯ ಮೂಲಕ ಕನ್ನಡ ಸಾಹಿತ್ಯಕ್ಕೆ ಸ್ಮರಣೀಯ ಕೊಡುಗೆಗಳನ್ನು ನೀಡಿದ್ದಾರೆ. ಉಡುಪಿಯಲ್ಲಿ ಶ್ರೀ ಕೃಷ್ಣನ ಲೀಲೆ ಎಷ್ಟಿದೆಯೋ ಅಷ್ಟೇ ಕನಕದಾಸರ ಭಕ್ತಿಯೂ ಇದೆ. ದಾಸರಲ್ಲಿ ಶ್ರೇಷ್ಠರು ಕನಕದಾಸರು. ಕನಕದಾಸರು ಹಾಕಿ ಕೊಟ್ಟಿರುವ ಮಾರ್ಗದಲ್ಲಿ ನಾವು ನಡೆಯಬೇಕು. ಮುಂದಿನ ಪೀಳಿಗೆಗೆ ದಾಸರ ವ್ಯಕ್ತಿತ್ವವನ್ನು ತಿಳಿಸಿ ಸಮಾಜವನ್ನು ಒಗ್ಗಟ್ಟಾಗಿರುವಂತೆ ನೋಡಿಕೊಳ್ಳಬೇಕು ಎಂದು ಶಾಸಕ ಮಹೇಶ ಟೆಂಗಿನಕಾಯಿ ತಿಳಿಸಿದರು.


Spread the love

LEAVE A REPLY

Please enter your comment!
Please enter your name here