ಬೆಳಗಾವಿ DCC ಬ್ಯಾಂಕ್ ಅಧ್ಯಕ್ಷರಾಗಿ ಅಣ್ಣಾಸಾಹೇಬ ಜೊಲ್ಲೆ, ಉಪಾಧ್ಯಕ್ಷರಾಗಿ ರಾಜು ಕಾಗೆ ಆಯ್ಕೆ!

0
Spread the love

ಬೆಳಗಾವಿ: ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಜೊಲ್ಲೆ-ಜಾರಕಿಹೊಳಿ ಬಣ ಜಯಗಳಿಸಿದೆ. ಬಿಜೆಪಿ’ಯ ಅಣ್ಣಾಸಾಹೇಬ್ ಜೊಲ್ಲೆ ಅಧ್ಯಕ್ಷರಾಗಿ ಹಾಗೂ ರಾಜು ಕಾಗೆ ಉಪಾಧ್ಯಕ್ಷರಾಗಿ ನಾಮಪತ್ರ ಸಲ್ಲಿಸಿದ್ದಾರೆ.ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ವಿವಿಧ ತಾಲ್ಲೂಕುಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಲಿಂಗಾಯತ ಸಮುದಾಯದ ನಾಯಕರೇ ಆಯ್ಕೆಯಾಗಿದ್ದರು.

Advertisement

ಈಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನವನ್ನು ಕೂಡ ಲಿಂಗಾಯತ ಸಮುದಾಯಕ್ಕೆ ನೀಡಿ, ಆ ಸಮುದಾಯದ ವಿಶ್ವಾಸ, ಬೆಂಬಲ ಗಳಿಸುವ ಪ್ರಯತ್ನವನ್ನು ಸತೀಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ನಡೆಸಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮೊದಲು ಖಾಸಗಿ ಹೋಟೆಲ್​ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ 13 ನಿರ್ದೇಶಕರು ಸಭೆ ಸೇರಿದ್ದರು. ಈ ಸಭೆಯಲ್ಲಿ ಒಮ್ಮತದಿಂದ ಅಣ್ಣಾಸಾಹೇಬ ಜೊಲ್ಲೆ ಅವರನ್ನು ಅಧ್ಯಕ್ಷ ಸ್ಥಾನಕ್ಕೆ, ರಾಜು ಕಾಗೆ ಅವರನ್ನು ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದರು.

ಆ ಬಳಿಕ ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಡಿಸಿಸಿ ಬ್ಯಾಂಕಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ನೂತನ ಅಧ್ಯಕ್ಷರಾಗಿ ಅಣ್ಣಾಸಾಹೇಬ ಜೊಲ್ಲೆ, ಉಪಾಧ್ಯಕ್ಷರಾಗಿ ರಾಜು ಕಾಗೆ ಆಯ್ಕೆ ಬಹುತೇಕ‌ ಖಚಿತವಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.


Spread the love

LEAVE A REPLY

Please enter your comment!
Please enter your name here