ಮತಗಳ್ಳತನದ ಬಗ್ಗೆ ಮೊದಲು ಪತ್ತೆ ಹಚ್ಚಿದ್ದೇ ಕರ್ನಾಟಕದಲ್ಲಿ: ಡಿಸಿಎಂ ಡಿಕೆ ಶಿವಕುಮಾರ್

0
Spread the love

ನವದೆಹಲಿ:- ಮತಗಳ್ಳತನದ ಬಗ್ಗೆ ಮೊದಲು ಪತ್ತೆ ಹಚ್ಚಿದ್ದೇ ಕರ್ನಾಟಕದಲ್ಲಿ ಇಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

Advertisement

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಚುನಾವಣೆಗಳಲ್ಲಿ ಮತಗಳ್ಳತನ ನಡೆಯುತ್ತಿರುವ ಬಗ್ಗೆ ಮೊದಲು ಪತ್ತೆ ಹಚ್ಚಿದ್ದೇ ಕರ್ನಾಟಕದಲ್ಲಿ. ಈಗ ಮಹಾರಾಷ್ಟ್ರ, ಹರಿಯಾಣ, ಬಿಹಾರದಲ್ಲಿ ನಡೆಸಿರುವ ಅಕ್ರಮಗಳು ಬೆಳಕಿಗೆ ಬಂದಿವೆ. ನಮ್ಮ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಾಂಕೇತಿಕವಾಗಿ ಸಹಿ ಸಂಗ್ರಹ ಅಭಿಯಾನದ ದಾಖಲೆಗಳನ್ನು ಹಸ್ತಾಂತರಿಸಿದ್ದೇವೆ. 100 ವರ್ಷಗಳ ಹಿಂದೆ ಮಹಾತ್ಮ ಗಾಂಧೀಜಿ ಅವರು ನಿಭಾಯಿಸಿದ್ದ ಜವಾಬ್ದಾರಿಯನ್ನು ಈಗ ನಮ್ಮ ರಾಜ್ಯದ ಮಲ್ಲಿಕಾರ್ಜುನ ಖರ್ಗೆ ಅವರು ನಿಭಾಯಿಸುತ್ತಿದ್ದಾರೆ.

ಅವರ ಮಾರ್ಗದರ್ಶನದಲ್ಲಿ ಮತದಾನದ ಹಕ್ಕು ರಕ್ಷಣೆ ಹೋರಾಟ ಮಾಡಿದ್ದೇವೆ. ಒಬ್ಬರಿಗೆ ಒಂದು ಮತ ಎಂದು ನಾವು ಹೋರಾಟ ಮಾಡುತ್ತಿದ್ದೇವೆ. ಮತಗಳ್ಳತನವನ್ನು ಮೊದಲು ಪತ್ತೆಹಚ್ಚಿದ್ದೇ ನಮ್ಮ ರಾಜ್ಯದಲ್ಲಿ. ಎಐಸಿಸಿ ಸಂಶೋಧನಾ ವಿಭಾಗ, ನಮ್ಮ ಅಭ್ಯರ್ಥಿಯಾಗಿದ್ದ ಮನ್ಸೂರ್ ಅಲಿ ಖಾನ್, ಕೆಪಿಸಿಸಿ ತಂಡ ಸೇರಿ ಈ ಮತಗಳ್ಳತನ ಪತ್ತೆ ಮಾಡಿ ಎಐಸಿಸಿಗೆ ಮಾಹಿತಿ ನೀಡಿದೆವು ಎಂದು ವಿವರಿಸಿದರು.

ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿಗೆ ಆಗಮಿಸಿ ಫ್ರೀಡಂ ಪಾರ್ಕ್‌ನಿಂದ ಈ ಹೋರಾಟ ಆರಂಭಿಸಲಾಯಿತು. ನಂತರ ಮಹಾರಾಷ್ಟ್ರ, ಹರಿಯಾಣ ಚುನಾವಣಾ ಅಕ್ರಮ ಬಯಲಾಗಿ ಈ ಹೋರಾಟ ಬಿಹಾರದವರೆಗೂ ಹಬ್ಬಿತು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ ಅವರ ನಿರ್ದೇಶನದ ಮೇರೆಗೆ ಈ ಅಭಿಯಾನ ಪೂರ್ಣಗೊಳಿಸಿದ್ದೇವೆ ಎಂದರು.


Spread the love

LEAVE A REPLY

Please enter your comment!
Please enter your name here