ಬೆಂಗಳೂರು ಗ್ರಾಮಾಂತರ:- ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಕೋಟಿ-ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಜರುಗಿದೆ.
Advertisement
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಹೈಡ್ರೋಪೋನಿಕ್ ಗಾಂಜಾ ವಶಕ್ಕೆ ಪಡೆದಿದ್ದಾರೆ. ಬ್ಯಾಗೇಜ್ ಪರಿಶೀಲನೆ ವೇಳೆ ಬ್ಯಾಂಕಾಕ್ನಿಂದ ಬಂದ ಪ್ರಯಾಣಿಕನ ಲಗೇಜ್ನಲ್ಲಿದ್ದ 2.37 ಕೋಟಿ ಮೌಲ್ಯದ 6.77 ಕೆಜಿ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಅಲ್ಲದೆ ಪ್ರಯಾಣಿಕನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ.
ಘಟನೆ ಸಂಬಂಧ NDPS ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಆರಂಭವಾಗಿದೆ.


