ಮೈಸೂರು: ಆರೋಗ್ಯ ಹದಗೆಟ್ಟ ಹಿನ್ನೆಲೆ ಕರ್ತವ್ಯ ನಿರತ ಸೆಕ್ಯೂರಿಟಿ ಗಾರ್ಡ್ ಸಾವನ್ನಪ್ಪಿರುವ ಘಟನೆ ಮೈಸೂರಿನ ವಿಶ್ವ ಪ್ರಾಚ್ಯ ವಿದ್ಯಾ ಸಂಶೋಧನಾಲಯದ ಬಳಿ ನಡೆದಿದೆ. ಸಂಜಯ್ (49) ಮೃತ ದುರ್ದೈವಿಯಾಗಿದ್ದು,
Advertisement
ಮೃತ ಸಂಜಯ್ ಆರೋಗ್ಯದ ಸಮಸ್ಯೆ ಇದ್ದರೂ ಕೆಲಸಕ್ಕೆ ಹಾಜರಾಗಿದ್ದರು. ಬೆಳಿಗ್ಗೆ ಕಾರ್ಯಾಲಯಕ್ಕೆ ಕರ್ತವ್ಯಕ್ಕೆ ಬಂದ ಸಮಯದಲ್ಲಿ ಅವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಸಂಜಯ್ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿದ್ದರು.
ಘಟನೆ ಸ್ಥಳಕ್ಕೆ ಸ್ಥಳೀಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಧಿಕೃತ ವರದಿ ಬಂದ ನಂತರ, ಘಟನೆ ಕಾರಣಗಳನ್ನು ಸ್ಪಷ್ಟಪಡಿಸಲಾಗುವುದು ಎಂದು ತಿಳಿಸಿದ್ದಾರೆ.


