ರಾಮನಗರ:- ದೇವಸ್ಥಾನದ ಬಳಿ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಿದ್ದ ಖದೀಮನನ್ನು ಬಂಧಿಸುವಲ್ಲಿ ಕಗ್ಗಲೀಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
Advertisement
ಬಂಧಿತ ಆರೋಪಿಯಿಂದ ಸುಮಾರು 2 ಲಕ್ಷ ರೂ. ಮೌಲ್ಯದ 4 ದ್ವಿಚಕ್ರ ವಾಹನಗಳನ್ನು ಸೀಜ್ ಮಾಡಿದ್ದಾರೆ. ಕಗ್ಗಲೀಪುರ, ಹಾರೋಹಳ್ಳಿ, ಬಿಡದಿ, ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಹಲವು ಕಳ್ಳತನ ಪ್ರಕರಣದ ಪ್ರಮುಖ ಆರೋಪಿ ಪೊಲೀಸರಿಗೆ ತಲೆನೋವಾಗಿದ್ದ. ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ಕೊನೆಗೂ ಖದೀಮನನ್ನ ಬಂಧಿಸಿದ್ದಾರೆ.
ಆರೋಪಿಯ ಬಂಧನದಿಂದ 4 ಪ್ರಕರಣಗಳು ಪತ್ತೆ ಆಗಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ


