ಬೆಂಗಳೂರು: ರಾಜ್ಯ ಸರ್ಕಾರವು ಮಹಿಳಾ ನೌಕರರ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುವ ಮಹಿಳಾ ನೌಕರರಿಗೆ ತಿಂಗಳಲ್ಲಿ ಒಂದು ದಿನ “ಋತುಚಕ್ರ ರಜೆ” ಕಡ್ಡಾಯವಾಗಿ ನೀಡಬೇಕು ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಈ ಕ್ರಮದಿಂದ ವರ್ಷಕ್ಕೆ 12 ದಿನ ವೇತನ ಸಹಿತ ರಜೆ ಪಡೆಯಲು ಮಹಿಳೆಯರಿಗೆ ಅವಕಾಶ ದೊರೆಯಲಿದೆ. ಇತ್ತೀಚೆಗಷ್ಟೇ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಇದೀಗ ಕಾರ್ಮಿಕ ಇಲಾಖೆ ಅದರ ಅನುಸಾರ ಅಧಿಕೃತ ಸರ್ಕ್ಯುಲರ್ ಬಿಡುಗಡೆ ಮಾಡಿದೆ.
ಸರ್ಕಾರದ ಷರತ್ತುಗಳು:
* ಮಹಿಳಾ ನೌಕರರು ತಮ್ಮ ಆಯಾ ತಿಂಗಳ ಋತುಚಕ್ರ ರಜೆಯನ್ನು ಅದೇ ತಿಂಗಳಲ್ಲಿಯೇ ಬಳಸಿಕೊಳ್ಳಬೇಕು — ಹಿಂದಿನ ತಿಂಗಳ ರಜೆಯನ್ನು ಮುಂದಿನ ತಿಂಗಳಿಗೆ ವಿಸ್ತರಿಸಲು ಅವಕಾಶವಿಲ್ಲ.
* ರಜೆ ಪಡೆಯಲು ಯಾವುದೇ ವೈದ್ಯಕೀಯ ಪ್ರಮಾಣಪತ್ರ ನೀಡುವ ಅಗತ್ಯವಿಲ್ಲ.
* 18 ರಿಂದ 52 ವರ್ಷ ವಯಸ್ಸಿನ ಎಲ್ಲ ಮಹಿಳಾ ನೌಕರರಿಗೆ ಈ ರಜೆ ಅನ್ವಯವಾಗುತ್ತದೆ.
ಈ ಕ್ರಮದಿಂದ ಮಹಿಳೆಯರ ಆರೋಗ್ಯ, ಮಾನಸಿಕ ನೆಮ್ಮದಿ ಹಾಗೂ ಉದ್ಯೋಗ ಸ್ಥಳದಲ್ಲಿ ಸಮಾನತೆ ಉತ್ತೇಜನವಾಗುವ ನಿರೀಕ್ಷೆ ವ್ಯಕ್ತವಾಗಿದೆ.


