ಸಚಿವ ಜಿ.ಪರಮೇಶ್ವರ್ ಬಗ್ಗೆ ಅವಹೇಳನಕಾರಿ ಹೇಳಿಕೆ: ಬಿಜೆಪಿ ಯುವ ಮುಖಂಡ ಅರೆಸ್ಟ್!

0
Spread the love

ಬೆಂಗಳೂರು:- ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿ ಯುವ ನಾಯಕ ಸಂತೋಷ್ ಕೋಟ್ಯಾನ್ ಅವರನ್ನು ಅರೆಸ್ಟ್ ಮಾಡಲಾಗಿದೆ.

Advertisement

ಸಂತೋಷ್ ಕೊಟ್ಯಾನ್ ಬಂಧಿತ ಆರೋಪಿ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ನೀಡಲಾಗುತ್ತಿರುವ ಸೌಲಭ್ಯವನ್ನು ಖಂಡಿಸಿ ಮಂಗಳವಾರ ನಡೆದಿದ್ದ ಬಿಜೆಪಿ ನೇತೃತ್ವದ ಪ್ರತಿಭಟನೆಯಲ್ಲಿ ಸಂತೋಷ್ ಕೊಟ್ಯಾನ್ ಮಾತನಾಡಿದ್ದರು. ಈ ವೇಳೆ ಅವರು ಗೃಹಸಚಿವ ಡಾ. ಪರಮೇಶ್ವರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾಗಿ ಕಾಂಗ್ರೆಸ್ ಕಾರ್ಯಕರ್ತರು ದೂರು ನೀಡಿದ್ದರು.

ಕಾಂಗ್ರೆಸ್ ಕಾರ್ಯಕರ್ತರ ದೂರಿನ ಆಧಾರದಲ್ಲಿ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಪೊಲೀಸರು ಸಂತೋಷ್ ಕೊಟ್ಯಾನ್ ಅವರನ್ನು ಬಂಧಿಸಿ, ಹೌಸಿಂಗ್ ಬೋರ್ಡ್‌ ನ್ಯಾಯಧೀಶರ ನಿವಾಸಕ್ಕೆ ಹಾಜರುಪಡಿಸಿದರು. ನಂತರ ನ್ಯಾಯಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ ಹೊರಡಿಸಿದರು.

ಗೃಹ ಸಚಿವರ ಬಗ್ಗೆ ಸಂತೋಷ್ ಕೋಟ್ಯಾನ್ ಹೇಳಿದ್ದೇನು?

ರಾಜ್ಯದಲ್ಲಿ ಏನು ನಡೆದರೂ ಗೃಹಸಚಿವರಿಗೆ ಗೊತ್ತಿಲ್ಲ, ಗೊತ್ತಿಲ್ಲ. ಇದಕ್ಕಾಗಿಯೇ ಪರಮೇಶ್ವರ್ ಮಗ ಮಗಳಾಗಿ ಪರಿವರ್ತನೆಯಾಗಿದ್ದಾರೆ’ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ದೂರು ದಾಖಲಿಸಿದ್ದರು.

ಪ್ರಸ್ತುತ ಸಂತೋಷ್ ಕೊಟ್ಯಾನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದ್ದು, ಚಿಕ್ಕಮಗಳೂರು ನಗರದಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here