ತುಮಕೂರು:- ದೆಹಲಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರಿನ ಓರ್ವ ವ್ಯಕ್ತಿಯನ್ನು ವಿಚಾರಣೆ ಮಾಡಲಾಗಿದೆ.
ಖಿಲಾಫತ್ ಉಗ್ರ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಶಂಕೆ ಹಿನ್ನೆಲೆ ತಿಲಕ್ ಪಾರ್ಕ್ ಠಾಣೆ ಪೊಲೀಸರು, ಪಿಹೆಚ್ ಕಾಲೋನಿಯ ನಿವಾಸಿಯೊಬ್ಬನ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಎಎಸ್ಪಿ ಪುರುಷೋತ್ತಮ್ ಅವರು ಶಂಕಿತನ ವಿಚಾರಣೆ ನಡೆಸಿದ್ದಾರೆ. ಖಿಲಾಫತ್ ಉಗ್ರ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಶಂಕೆಯಡಿ ಪ್ರಶ್ನೆ ಮಾಡಲಾಗಿದೆ.
ಶಂಕಿತ ವ್ಯಕ್ತಿಯು ಸಂಘಟನೆಯ ಮುಖಂಡರಿಗೆ ತುಮಕೂರಿನಲ್ಲಿ ಸಭೆ ನಡೆಸಲು ಅವಕಾಶ ಮಾಡಿದ್ದ. ಈ ಪ್ರಕರಣ ಸಂಬಂಧ ಎನ್ಐಎ ಬಂಧಿಸಿ ತಿಹಾರ್ ಜೈಲಿಗೆ ಕಳುಹಿಸಿತ್ತು. 6 ವರ್ಷ ಶಿಕ್ಷೆ ಅನುಭವಿಸಿ ದೆಹಲಿಯ ತಿಹಾರ್ ಜೈಲಿನಿಂದ ಹೊರ ಬಂದಿದ್ದ. ಈ ಹಿನ್ನಲೆ ದೆಹಲಿ ಸ್ಫೋಟದ ಮರುದಿನ ಶಂಕಿತನಿಗೆ ವಿಚಾರಣೆ ನಡೆದಿದೆ. ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಿ ಪೊಲೀಸರು ನಂತರ ಬಿಟ್ಟು ಕಳುಹಿಸಿದ್ದಾರೆ. ಯಾವುದೇ ಕೈವಾಡ ಇಲ್ಲದ ಹಿನ್ನೆಲೆಯಲ್ಲಿ ಆತನನ್ನು ಬಿಟ್ಟು ಕಳುಹಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.


