HomeKarnataka Newsಚಿತ್ತಾಪುರದಲ್ಲಿ RSS​ ಪಥಸಂಚಲನಕ್ಕೆ ಗ್ರೀನ್ ಸಿಗ್ನಲ್: ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು..?

ಚಿತ್ತಾಪುರದಲ್ಲಿ RSS​ ಪಥಸಂಚಲನಕ್ಕೆ ಗ್ರೀನ್ ಸಿಗ್ನಲ್: ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು..?

For Dai;y Updates Join Our whatsapp Group

Spread the love

ಬೆಂಗಳೂರು: ರಾಜ್ಯಾದ್ಯಂತ ಭಾರಿ ಕುತೂಹಲ ಮೂಡಿಸಿದ್ದ ಚಿತ್ತಾಪುರ RSS ಪಥಸಂಚಲನಕ್ಕೆ ಕಲಬುರಗಿ ಜಿಲ್ಲಾಡಳಿತ ಅನುಮತಿ ನೀಡಿದ್ದು, ಒಟ್ಟು 325 ಜನರು ಮಾತ್ರ ಭಾಗಿಯಾಗಲು ಅವಕಾಶ ನೀಡಿರೋದಾಗಿ ತಿಳಿಸಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ಮಾಡಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ಅವರು, ಸಂವಿಧಾನಕ್ಕೆ ತಲೆಬಾಗಿದರೆ ಮಾತ್ರ ಬದುಕು ಸುಂದರ. ಸಂವಿಧಾನಕ್ಕೆ ಸವಾಲು ಹಾಕಿದರೆ ಬದುಕು ದುಸ್ಥರ. ಆರ್​​​​ಎಸ್​​ಎಸ್​​ ಎಂಬ ಸಂಘಟನೆಗೆ ಈ ಸತ್ಯದ ಅರಿವಾಗಿದೆ ಎಂದು ಭಾವಿಸಿದ್ದೇನೆ. ಸಂವಿಧಾನ, ಕಾನೂನುಗಳು ನಮಗೆ ಅನ್ವಯಿಸುವುದಿಲ್ಲ ಎಂಬಂತೆ ನಡೆದುಕೊಳ್ಳುತ್ತಿದ್ದ RSS ಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ ಎಂದು ಕಿಡಿಕಾರಿದ್ದಾರೆ.

ಯಾವುದೇ ಸಂಘಗಳು, ವ್ಯಕ್ತಿಗಳು ಇದನ್ನು ಅರ್ಥೈಸಿಕೊಂಡು ನೀತಿ, ನಿಯಮಗಳಿಗೆ ಬದ್ಧರಾಗಿ ನಡೆಯಬೇಕು. ಸರ್ಕಾರ ಮತ್ತು ಕಲಬುರಗಿ ಜಿಲ್ಲಾಡಳಿತ ರೂಪಿಸಿರುವ ಮಾನದಂಡಗಳನ್ನು ಒಪ್ಪಿ, ನಿಯಮಗಳಿಗೆ ಅನುಸಾರವಾಗಿ ಆರ್​​ಎಸ್​​ಎಸ್​​ ತಮ್ಮ ಕಾರ್ಯಕ್ರಮ ನಡೆಸಬೇಕು ಇದರ ಹೊರತಾಗಿ ಯಾವುದೇ ಅತಿ ಬುದ್ದಿವಂತಿಕೆಗೂ ಅವಕಾಶವಿಲ್ಲ ಎಂದಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!