ಗದಗ: ಗದಗ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಶಿಗ್ಲಿ ಗ್ರಾಮದ ಎಸ್.ಎಸ್. ಕೂಡ್ಲಮಠ ಮಾಧ್ಯಮಿಕ ಶಾಲೆಯ ಮಂಜುನಾಥ ಹಳೆಹಿತ್ತಿ ಸರಪಳಿ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಚಕ್ರ ಎಸೆತದಲ್ಲಿ ರೇಣುಕಾ ಹಳ್ಳಿಕುಪ್ಪಿ ಸರಪಳಿ ದ್ವಿತೀಯ, ಗುಂಡು ಮತ್ತು ಸರಪಳಿ ಎಸೆತದಲ್ಲಿ ಶ್ರೀಶಗೌಡ ಪಾಟೀಲ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ ಹರ್ಷ ವ್ಯಕ್ತಪಡಿಸಿದೆ.
Trending Now



