ವಿಜಯಸಾಕ್ಷಿ ಸುದ್ದಿ, ಗದಗ: ಮಹಾತ್ಮ ಗಾಂಧಿ ಆರ್.ಡಿ.ಪಿ.ಆರ್ ವಿಶ್ವವಿದ್ಯಾಲಯದಲ್ಲಿ ಕರ್ನಾಟಕ ಇತಿಹಾಸ ಅಕಾಡೆಮಿ, ಮಹಾತ್ಮ ಗಾಂಧಿ ಆರ್.ಡಿ.ಪಿ.ಆರ್ ವಿಶ್ವವಿದ್ಯಾಲಯ, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸಹಯೋಗದಲ್ಲಿ ಜರುಗಿದ 39ನೇ ವಾರ್ಷಿಕ ರಾಷ್ಟ್ರೀಯ ಸಮ್ಮೇಳನ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜೂರ ಗ್ರಾಮದ ಡಾ. ಮಲ್ಲಿಕಾರ್ಜುನ ಕುಂಬಾರರಿಗೆ ‘ನೋಳಂಬ ಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕುಂಬಾರ ಅವರ ‘ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುಧೋಳ ಗ್ರಾಮದ ಅಪ್ರಕಟಿತ ಶಾಸನ’ ಸಂಶೋಧನೆಯನ್ನು ಪರಿಗಣಿಸಿ ಅಕಾಡೆಮಿಯು ಅರಸಿಕೆರೆ ಮೇಲಣಮಠದ ಲಿಂ.ಶ್ರೀ ಎಸ್.ಸಿದ್ದಣ್ಣಯ್ಯ ಮತ್ತು ಶ್ರೀಮತಿ ಗಂಗಮ್ಮ ಸ್ಮಾರಕ ಟ್ರಸ್ಟ್ ನೀಡುವ ‘ನೋಳಂಬ ಶ್ರೀ’ ಪ್ರಶಸ್ತಿ ಪ್ರಕಟಿಸಿತ್ತು.
ಸಮಾರಂಭದಲ್ಲಿ ಡಾ. ಕುಂಬಾರ ಸೇರಿದಂತೆ ಇತಿಹಾಸ ತಜ್ಞ ಡಾ. ಶ್ರೀನಿವಾಸ ಪಾಡಿಗಾರ, ಡಾ. ಕೆ.ವಸಂತಲಕ್ಷ್ಮೀ, ಡಾ. ಎಸ್.ನಾಗರಾಜಪ್ಪ, ಡಾ. ಶರಣಬಸಪ್ಪ ಕೋಲ್ಕಾರ, ಡಾ. ರಮೇಶ ನಾಯಕ, ಡಾ. ಪದ್ಮಜಾ ದೇಸಾಯಿ, ಪ್ರೊ. ಶಾಶ್ವತಸ್ವಾಮಿ ಮುಕ್ಕುಂದಿಮಠ, ಡಾ. ಎಂ.ಕೋಟ್ರೇಶ್, ಮಹಾದೇವ ಜಗತಾಪ, ಡಾ. ಎ.ಓ. ನರಸಿಂಹಮೂರ್ತಿ, ಓವೆನ್ ಮೌರ್ಯ ಚಕ್ರವರ್ತಿ ಅವರಿಗೂ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ, ಸಮ್ಮೇಳನದ ಸರ್ವಾಧ್ಯಕ್ಷ ಡಾ. ರಾಜಾರಾಮ ಹೆಗಡೆ, ವಿಶ್ವವಿದ್ಯಾಲಯದ ಸಹಾಯಕ ನಿರ್ದೇಶಕ ಡಾ. ಅಬ್ದುಲ್ ಮುಲ್ಲಾ, ಇತಿಹಾಸ ತಜ್ಞ ಡಾ. ಲಕ್ಷ್ಮಣ್ ತೆಲಗಾವಿ, ವಿಶ್ವವಿದ್ಯಾಲಯದ ಕುಲಪತಿ ಡಾ. ಸುರೇಶ ನಾಡಗೌಡರ ಮುಂತಾದವರಿದ್ದರು.



