ವಿಜಯಸಾಕ್ಷಿ ಸುದ್ದಿ, ಗದಗ: ಶ್ರದ್ಧಾ ಸ್ವರ ಸಂಗೀತ ವೆಲ್ಫೇರ್ ಟ್ರಸ್ಟ್‌ನ ಅಧ್ಯಕ್ಷೆ ಜ್ಯೋತಿ ಉಜ್ಜಲ ಕಬಾಡಿ ಅವರಿಗೆ ಕದಂಬ ಕನ್ನಡ ಸೇನೆ ಕರ್ನಾಟಕ ವತಿಯಿಂದ ನೀಡಲಾಗುವ ‘ಕದಂಬ ಸೇವಾ ರತ್ನ’ ರಾಜ್ಯಮಟ್ಟದ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಸಂಗೀತ, ಕಲೆ-ಸಂಸ್ಕೃತಿ ಪ್ರಚಾರ, ಸಮಾಜ ಸೇವೆ ಹಾಗೂ ಪ್ರತಿಭಾವೃದ್ಧಿಗೆ ನೀಡಿರುವ ಅಮೂಲ್ಯ ಕೊಡುಗೆಗಾಗಿ ಇವರನ್ನು ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕನ್ನಡ ಸಂಸ್ಕೃತಿಯ ಸೇವೆಯಲ್ಲಿ ತೊಡಗಿಸಿಕೊಂಡಿರುವ ಇವರ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕವಾಗಿದೆ.
ಪ್ರಶಸ್ತಿ ಪ್ರದಾನ ಸಮಾರಂಭವು ಕದಂಬರ ನಾಡು ಬನವಾಸಿಯಲ್ಲಿ ಭವ್ಯವಾಗಿ ನೆರವೇರಿತು. ಈ ಸಂದರ್ಭದಲ್ಲಿ ಕದಂಬ ಕನ್ನಡ ಸೈನ್ಯದ ಸಂಸ್ಥಾಪಕ ಅಧ್ಯಕ್ಷ ನಾ. ಅಂಬರೀಶ್, ರಾಜ್ಯಾಧ್ಯಕ್ಷ ಶಿವಕುಮಾರ್, ರಾಜ್ಯ ಸಂಚಾಲಕ ಗೈಬುಸಾಬ ಕಲೆಬಾಯಿ, ಉತ್ತರ ಕನ್ನಡ ಜಿಲ್ಲೆಯ ಅಧ್ಯಕ್ಷ ಸತೀಶ್ ನಾಯಕ್, ಗದಗ ಜಿಲ್ಲಾಧ್ಯಕ್ಷ ಈಶ್ವರ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರಾದ ಸೌಮ್ಯ ಜೋಶ್ವ ಮುಂತಾದವರು ಉಪಸ್ಥಿತರಿದ್ದರು.


