ಬಿಹಾರ: ಬಿಹಾರದ 243 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಇಂದು ಬೆಳಿಗ್ಗೆ ಆರಂಭವಾಗಿದ್ದು, ಮೊದಲ ಹಂತದ ಫಲಿತಾಂಶಗಳಲ್ಲಿ ನಿತೀಶ್ ಕುಮಾರ್ ನೇತೃತ್ವದ NDA ಮೈತ್ರಿಕೂಟ ಭರ್ಜರಿ ಮುನ್ನಡೆ ಸಾಧಿಸಿದೆ. ತೇಜಸ್ವಿ ಯಾದವ್ ನೇತೃತ್ವದ ಮಹಾಘಟಬಂಧನ್ ಸಹ ಕಠಿಣ ಪೈಪೋಟಿ ನೀಡುತ್ತಿದೆ.
NDA 120 ಸ್ಥಾನಗಳಲ್ಲಿ ಮುನ್ನಡೆ
ಮತ ಎಣಿಕೆಯ ಆರಂಭಿಕ ಹಂತದಲ್ಲೇ NDA ಶತಕ ಬಾರಿಸಿ 120 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ–ಜೆಡ್ಯು ಮೈತ್ರಿಕೂಟದ ಅಭ್ಯರ್ಥಿಗಳು ಹಲವಾರು ಪ್ರದೇಶಗಳಲ್ಲಿ ಉತ್ತಮ ಪ್ರದರ್ಶನ ತೋರಿದ್ದಾರೆ.
ವಿಪಕ್ಷಗಳ ಒಕ್ಕೂಟವಾದ ಮಹಾಘಟಬಂಧನ್ 95 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಅನೇಕ ಕಡೆಗಳಲ್ಲಿ ಹೋರಾಟ ತೀವ್ರಗೊಂಡಿದೆ. ಇತರ ಅಭ್ಯರ್ಥಿಗಳು ನಾಲ್ಕು ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದಾರೆ.
ಬಿಹಾರದಲ್ಲಿ ಒಟ್ಟು 243 ವಿಧಾನಸಭಾ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಸರ್ಕಾರ ರಚಿಸಲು 122 ಸ್ಥಾನಗಳ ಬಹುಮತ ಅಗತ್ಯ. ಆರಂಭಿಕ ಫಲಿತಾಂಶಗಳ ಪ್ರಕಾರ NDA ಮುನ್ನಡೆಯಲ್ಲಿದ್ದರೂ ಅಂತಿಮ ಸಂಖ್ಯೆ ಯಾರ ಪಾಲಾಗುವದು ಎನ್ನುವುದು ಮುಂದಿನ ಗಂಟೆಗಳಲ್ಲಿ ಸ್ಪಷ್ಟವಾಗಲಿದೆ.
ಇದೆ ವೇಳೆ, 6 ರಾಜ್ಯಗಳು ಹಾಗೂ 1 ಕೇಂದ್ರಾಡಳಿತ ಪ್ರದೇಶದ 8 ವಿಧಾನಸಭಾ ಉಪಚುನಾವಣೆಗಳ ಮತ ಎಣಿಕೆಯೂ ಆರಂಭವಾಗಿದೆ. ಎಲ್ಲಾ ಕ್ಷೇತ್ರಗಳ ಅಂತಿಮ ಫಲಿತಾಂಶಗಳು ಇಂದು ಸಂಜೆ ಅಥವಾ ರಾತ್ರಿ ವೇಳೆಗೆ ಲಭ್ಯವಾಗುವ ಸಾಧ್ಯತೆ ಇದೆ.


