ಬಿಹಾರದಲ್ಲಿ ಕಟ್ಟಾ ಸರ್ಕಾರ್ ಇನ್ನೆಂದಿಗೂ ಬರುವುದಿಲ್ಲ: ಪ್ರಧಾನಿ ನರೇಂದ್ರ ಮೋದಿ

0
Spread the love

ನವದೆಹಲಿ:- ಬಿಹಾರದಲ್ಲಿ ಕಟ್ಟಾ ಸರ್ಕಾರ್‌ (ಬಂದೂಕು ಹಿಡಿದ ಸರ್ಕಾರ) ಇನ್ನೆಂದಿಗೂ ಬರೋದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Advertisement

ಬಿಹಾರದಲ್ಲಿ ಎನ್‌ಡಿಎ ಪ್ರಚಂಡ ವಿಜಯ ಸಾಧಿಸಿದ ವಿಚಾರವಾಗಿ ಮಾತನಾಡಿದ ಅವರು, ನಾನು ಚುನಾವಣೆ ವೇಳೆ ʻಜಂಗಲ್‌ ರಾಜ್‌ʼ ಮತ್ತು ʻಕಟ್ಟಾ ಸರ್ಕಾರ್‌ʼ ಬಗ್ಗೆ ಮಾತನಾಡಿದಾಗೆಲ್ಲ ಆರ್‌ಜೆಡಿಯಿಂದ ಯಾವುದೇ ವಿರೋಧ ಕೇಳಿಬರುತ್ತಿರಲಿಲ್ಲ. ಆದ್ರೆ ಕಾಂಗ್ರೆಸ್‌ಗೆ ಮಾತ್ರ ನೋವುಂಟಾಗಿತ್ತು. ನಾನು ಮತ್ತೆ ಹೇಳುವೆ ಬಿಹಾರದಲ್ಲಿ ʻಕಟ್ಟಾ ಸರ್ಕಾರ್‌ʼ ಇನ್ನೆಂದಿಗೂ ಬರಲ್ಲ ಎಂದು ನುಡಿದರು.

ನಾವು ಜನರ ಸೇವಕರು, ನಮ್ಮ ಕಠಿಣ ಪರಿಶ್ರಮದಿಂದ ಜನರನ್ನ ಸಂತೋಷಪಡಿಸುತ್ತಲೇ ಇರುತ್ತೇವೆ. ಲಕ್ಷಾಂತರ ಜನರ ಹೃದಯ ಕದ್ದಿದ್ದೇವೆ. ಅದಕ್ಕಾಗಿಯೇ ಇಡಿ ಬಿಹಾರ ʻಫಿರ್‌ ಏಕ್‌ ಬಾರ್‌ ಎನ್‌ಡಿಎ ಸರ್ಕಾರ್‌ʼ (ಮತ್ತೊಮ್ಮೆ ಎನ್‌ಡಿಎ ಸರ್ಕಾರ) ಅಂತ ಹೇಳಿದೆ. ಎನ್‌ಡಿಎಗೆ ಪ್ರಚಂಡ ಗೆಲುವು ನೀಡಬೇಕು ಅಂತ ಬಿಹಾರದ ಜನರನ್ನ ಕೇಳಿಕೊಂಡಿದ್ದೆ, ನನ್ನ ಒಂದು ಕೂಗಿಗೆ ಅವರು ಕಿವಿಗೊಟ್ಟಿದ್ದಾರೆ. 2010 ರಿಂದ ಈಚೆಗೆ ಮೈತ್ರಿಕೂಟಕ್ಕೆ ಅತಿದೊಡ್ಡ ಅಂತರದ ಗೆಲುವು ನೀಡಿದ್ದಾರೆ. ಅದಕ್ಕಾಗಿ ಇಡೀ ಎನ್‌ಡಿಎ ಕುಟುಂಬದ ಪರವಾಗಿ, ನಾನು ಬಿಹಾರದ ಎಲ್ಲಾ ಜನರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಭಾವುಕರಾದರು.


Spread the love

LEAVE A REPLY

Please enter your comment!
Please enter your name here