HomePolitics Newsರಾಜ್ಯದಲ್ಲಿ 2028 ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಶತಸಿದ್ಧ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ 2028 ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಶತಸಿದ್ಧ: ಸಿಎಂ ಸಿದ್ದರಾಮಯ್ಯ

For Dai;y Updates Join Our whatsapp Group

ಬೆಂಗಳೂರು:- ರಾಜ್ಯದಲ್ಲಿ 2028 ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬರೆದಿರುವ “ನೀರಿನ ಹೆಜ್ಜೆ: ವಿವಾದ-ಒಪ್ಪಂದ-ತೀರ್ಪು ಕೃತಿ ಬಿಡುಗಡೆ ಮಾಡಿ ಮಾತನಾಡಿದರು.

ಶಿವಕುಮಾರ್ ಅವರು ಜಲಸಂಪನ್ಮೂಲ ಸಚಿವರಾಗಿ ತಮ್ಮ ಅನುಭವ ಮತ್ತು ಗ್ರಹಿಕೆಯನ್ನು ಹಾಗೂ ನೀರಿನ ಮಹತ್ವವನ್ನು ಪುಸ್ತಕದಲ್ಲಿ ಉಲ್ಲೇಖಿಸಿದ್ದಾರೆ. ನಾನು ಪುಸ್ತಕವನ್ನು ಪೂರ್ತಿ ಓದುವೆ ಎಂದು ತಿಳಿಸಿದರು. ಮಹದಾಯಿ, ಕೃಷ್ಣ ಮತ್ತು ಕಾವೇರಿ ಸೇರಿ ಅಂತಾರಾಜ್ಯ ಜಲ ವಿವಾದಗಳು ಇನ್ನೂ ಜೀವಂತವಾಗಿದ್ದು, ರಾಜ್ಯಕ್ಕೆ ಪೂರ್ತಿ ಅನುಕೂಲಕರವಾದ ನ್ಯಾಯಬದ್ದ ತೀರ್ಮಾನಗಳು ಇನ್ನೂ ಆಗಬೇಕಿದೆ ಎಂದರು.

ಮೇಕೆದಾಟಿನಲ್ಲಿ 67 ಟಿಎಂಸಿ ನೀರನ್ನು ಶೇಖರಣೆ ಮಾಡಲಾಗುತ್ತದೆ. ಈ ಯೋಜನೆಯಲ್ಲಿ ನಮಗಿಂತ ಹೆಚ್ಚು ತಮಿಳುನಾಡಿಗೇ ಹೆಚ್ಚು ಅನುಕೂಲ. ಆದರೂ ಅವರು ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ತಮಿಳುನಾಡು ಸರ್ಕಾರ ಕೇವಲ ರಾಜಕೀಯ ಕಾರಣಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ. ಇದನ್ನು ನಾವು ವಿರೋಧಿಸಿ ಪಾದಯಾತ್ರೆ ನಡೆಸಿದೆವು. ಪಾದಯಾತ್ರೆಗೆ ಹಲವು ಟೀಕೆಗಳು ಬಂದರೂ ನಾವು ಎದೆಗುಂದದೆ ಪಾದಯಾತ್ರೆ ಯಶಸ್ವಿಗೊಳಿಸಿದೆವು ಎಂದು ವಿವರಿಸಿದರು.

ಮತ್ತೊಂದು ಕಡೆ ಕೃಷ್ಣ ನದಿ ನೀರಿನ ವಿವಾದದಲ್ಲೂ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಮಾಡಿಲ್ಲ. ಜೆಡಿಎಸ್ ಪಕ್ಷವಾಗಲೀ, ಬಿಜೆಪಿ ಪಕ್ಷವಾಗಲೀ ಈ ಪಕ್ಷಗಳ ಸಂಸದರಾಗಲೀ ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆಯಾಗಲೀ, ಆರ್ಥಿಕವಾಗಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಬಗೆಯುತ್ತಿರುವ ದ್ರೋಹದ ಬಗ್ಗೆಯೂ ಮಾತಾಡುವುದಿಲ್ಲ ಎಂದು ಟೀಕಿಸಿದರು. ಇಷ್ಟು ಮಾತ್ರವಲ್ಲದೆ ಕಬ್ಬು ಬೆಳಗಾರರಿಗೆ ದ್ರೋಹ ಬಗೆದಿರುವುದೂ ಕೇಂದ್ರ ಸರ್ಕಾರ. ಈ ಬಗ್ಗೆಯೂ ಬಿಜೆಪಿ, ಜೆಡಿಎಸ್ ಸಂಸದರು ಬಾಯಿ ಬಿಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನದಿ ವಿವಾದಗಳ ಆಳ ಅಗಲವನ್ನು ಜನರಿಗೆ ತಿಳಿಸುವ ಕೆಲಸವನ್ನು ನೀರಿನ ಹೆಜ್ಜೆ ಜನರಿಗೆ ತಿಳಿಸಲಿದೆ. ರಾಜ್ಯದಲ್ಲಿ 2028 ರಲ್ಲೂ ಕಾಂಗ್ರೆಸ್ಸೇ ಅಧಿಕಾರಿಕ್ಕೆ ಬರುವುದು ಶತಸಿದ್ಧ ಎಂದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img