ಪದ್ಮಶ್ರೀ ಸಾಲುಮರದ ತಿಮ್ಮಕ್ಕ ನಿಧನಕ್ಕೆ ಶ್ರೀ ರಂಭಾಪುರಿ ಜಗದ್ಗುರುಗಳ ಸಂತಾಪ

0
Spread the love

ವಿಜಯಸಾಕ್ಷಿ ಸುದ್ದಿ, ಬಾಳೆಹೊನ್ನೂರು: ವೃಕ್ಷ ಮಾತೆಯೆಂದೇ ಖ್ಯಾತಿಯಾಗಿದ್ದ ಶತಾಯುಷಿ ಸಾಲುಮರದ ತಿಮ್ಮಕ್ಕ ಅಗಲಿಕೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Advertisement

ಗಿಡ-ಮರಗಳನ್ನೇ ತಮ್ಮ ಮಕ್ಕಳೆಂದು ಭಾವಿಸಿ ಪೋಷಿಸುತ್ತಿದ್ದ ಅವರು 8 ಸಾವಿರಕ್ಕೂ ಹೆಚ್ಚು ಮರಗಳನ್ನು ಬೆಳೆಸಿದ್ದು ಹಿರಿದಾದ ಸಾಧನೆಯಾಗಿದೆ. ಶ್ರೀ ರಂಭಾಪುರಿ ಪೀಠದ ಹಲವಾರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅವರು ಆಶೀರ್ವಾದ ಪಡೆದದ್ದು ತಮ್ಮ ಮನದಲ್ಲಿ ಹಸಿರಾಗಿದೆ. ಸರಳ ಸಜ್ಜನಿಕೆಯ ಸಾಲುಮರದ ತಿಮ್ಮಕ್ಕ ಅವರ ಅಗಲಿದ ಪವಿತ್ರ ಆತ್ಮಕ್ಕೆ ದಯಾಘನನಾದ ಪರಮಾತ್ಮನು ಚಿರಶಾಂತಿ ನೀಡಲಿ ಮತ್ತು ಅವರ ಅಗಲಿಕೆಯನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬದವರಿಗೂ ಮತ್ತು ಅಭಿಮಾನಿಗಳಿಗೂ ನೀಡಲಿ ಎಂದು ಶ್ರೀಗಳು ತಮ್ಮ ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here