ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಗೆಲುವಿಗೆ ನರೇಗಲ್ಲ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಬಸ್ ನಿಲ್ದಾಣದ ವೃತ್ತದಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ನಿತೀಶ್ ಕುಮಾರ್ ಹೆಸರುಗಳನ್ನು ಕೂಗಿ ಜೈಕಾರ ಹಾಕಿದ ಮುಖಂಡರು ಪರಸ್ಪರ ಸಿಹಿ ತಿನಿಸಿ ಸಂಭ್ರಮಿಸಿದರು.
ರೋಣ ಮಂಡಲ ಬಿಜೆಪಿ ಮಾಜಿ ಅಧ್ಯಕ್ಷ ಮುತ್ತಣ್ಣ ಕಡಗದ ಮಾತನಾಡಿ, ಮತ ಕಳವು ಹೆಸರಿನಲ್ಲಿ ಕಾಂಗ್ರೆಸ್ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಅಣಕಿಸುವಂತೆ ಮಾಡಿದ್ದರಿಂದ ಬಿಹಾರದ ಜನ ತಕ್ಕ ಪಾಠ ಕಲಿಸಿದ್ದಾರೆ. ರಾಹುಲ್ ಗಾಂಧಿ ಇನ್ನು ಮುಂದಾದರೂ ಪಾಠ ಕಲಿಯಬೇಕು ಎಂದರು.
ಪ್ರಕಾಶ ಹಕ್ಕಿ, ಪ.ಪಂ ಮಾಜಿ ಸದಸ್ಯ ಯಲ್ಲಪ್ಪ ಮಣ್ಣೊಡ್ಡರ, ಮಲ್ಲಿಕಾರ್ಜುನಗೌಡ ಭೂಮನಗೌಡ್ರ, ಹುಲಗಪ್ಪ ಬಂಡಿವಡ್ಡರ, ಮಹೇಶ ಶಿವಶಿಂಪರ, ವೀರಣ್ಣ ಅಣ್ಣಗೇರಿ, ವೀರೇಶ ಮಣ್ಣೊಡ್ಡರ, ಶಿವು ಎಸ್, ಎಂ.ಜಿ. ಪಾಟೀಲ ಮುಂತಾದವರಿದ್ದರು.



