ಬೆಂಗಳೂರು:- ಬಿಹಾರ ಚುನಾವಣೆಯ ಫಲಿತಾಂಶದ ಬಗ್ಗೆ ಬಮೂಲ್ ಅಧ್ಯಕ್ಷ ಡಿಕೆ ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು ಗೆಲವು ಎರಡೂ ಇರುತ್ತದೆ. ಬಿಹಾರದಲ್ಲಿ ನಮ್ಮ ರಾಜ್ಯದಂತೆ ಅಲ್ಲಿಯೂ ಗ್ಯಾರಂಟಿ ಅನುಷ್ಠಾನ ಮಾಡಿದ್ದರು. ಈ ಕಾರಣದಿಂದ ಮಹಿಳಾ ಮತದಾರರು ಎನ್‌ಡಿಎ ಪರ ಒಲವು ತೋರಿದ್ದಾರೆ ಎಂದು ತಿಳಿಸಿದರು.
ಜನರು ತೀರ್ಪು ನೀಡಿದ್ದನ್ನು ನಾವು ಸ್ವಾಗತ ಮಾಡುತ್ತೇವೆ. ಪಕ್ಷಕ್ಕೆ ಸೋಲು ಗೆಲುವು ಹೊಸದೇನಲ್ಲ. ಆದರೆ ನಿರಂತರವಾಗಿ ವಿರೋಧ ಪಕ್ಷವಾಗಿದ್ದರೂ ಪಕ್ಷ ಸಂಘಟಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಇನ್ನೂ ನನ್ನ ಅಣ್ಣ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕೆಂಬ ಮಾತನ್ನು ನಾನು ಅನೇಕ ಬಾರಿ ಸ್ಪಷ್ಟವಾಗಿ ಹೇಳಿದ್ದೇನೆ. ಸಂಪುಟ ಪುನಾರಚನೆ ಆದರೆ ನಾಯಕತ್ವ ಬದಲಾವಣೆ ಆಗಲ್ಲ ಎಂಬ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ಏನೇ ಇದ್ದರೂ ಪಕ್ಷದ ಹೈಕಮಾಂಡ್ ನಿರ್ಧಾರ ಮಾಡಬೇಕೇ ಹೊರತು ಬೇರೆ ಯಾರು ಅಲ್ಲ. ಏನೇನಾಗುತ್ತೆ ಎನ್ನುವುದನ್ನು ಕಾದು ನೋಡೋಣ. ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು.



