ಬೆಂಗಳೂರು:- ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮೊಬೈಲ್ ಶಾಪ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಬಾಣಸವಾಡಿ ಬಳಿಯ ಜಯಂತಿ ಸರ್ಕಲ್ ನಲ್ಲಿ ಬೆಳಗ್ಗಿನ ಜಾವ 4:30ರ ಸುಮಾರಿಗೆ ಜರುಗಿದೆ.
ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಸ್ಥಳೀಯರು, ಅಗ್ನಿ ಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಆಧರಿಸಿ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ, ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ..
ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.



