ಮೂರನೇ ಅಲೆ ನಿಯಂತ್ರಣಕ್ಕಾಗಿ ಆ. 30 ರವರೆಗೆ ಜಿಲ್ಲಾದ್ಯಂತ ನಿಷೇಧಾಜ್ಞೆ, ನೈಟ್ ಕರ್ಫ್ಯೂ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

Advertisement

ಗದಗ ಜಿಲ್ಲೆಯಾದ್ಯಂತ ಕೋವಿಡ್-19 ವೈರಸ್ ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ದಂಡ ಪ್ರಕ್ರಿಯೆ ಸಂಹಿತೆ 1973,

ಸಾಂಕ್ರಾಮಿಕ  ರೋಗ ಕಾಯ್ದೆ 1897  ದಿ ಕರ್ನಾಟಕ ಎಪಿಡಮಿಕ್ ಡಿಸೀಸ್ ಕೋವಿಡ್-19 ರೆಗ್ಯುಲೇಷನ್ 2020 ಹಾಗೂ ವಿಪತ್ತು ನಿರ್ವಹಣಾ  ಕಾಯ್ದೆ 2005 ರ ಪ್ರಕಾರ

ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಮುಖಗವಸುಗಳನ್ನು ಧರಿಸುವಿಕೆ, ಕೈಗಳನ್ನು ಶುಚಿಯಾಗಿಡುವಿಕೆ, ಮತ್ತು ದೈಹಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ.

ಸರ್ಕಾರ ಹೊರಡಿಸಿದ ಮೊಹರಂ ಹಾಗೂ ಗಣೇಶ ಹಬ್ಬಗಳ ಮಾರ್ಗಸೂಚಿಗಳ ಆದೇಶಗಳಡಿ ಸಮೀಕ್ಷೆ, ನಿಯಂತ್ರಣ ಹಾಗೂ ಮುನ್ನೆಚ್ಚರಿಕೆ ಮಾರ್ಗಸೂಚಿಗಳ ಎಲ್ಲ ಷರತ್ತು ಹಾಗೂ ಸಡಿಲಿಕೆಗಳಿಗೆ ಒಳಪಟ್ಟು

ಅವುಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಸಲುವಾಗಿ ಆಗಸ್ಟ 30 ರ ಬೆಳಗಿನ 6 ಗಂಟೆಯವರೆಗೆ ಪ್ರತಿ ರಾತ್ರಿ 9 ಗಂಟೆಯಿಂದ ಬೆಳಗಿನ 5 ಗಂಟೆಯವರೆಗಿನ ರಾತ್ರಿ ಕಫ್ರ್ಯೂ ಮಾರ್ಗಸೂಚಿಗಳನ್ನು ಜಾರಿಗೊಳಿಸಿ ಜಿಲ್ಲಾದ್ಯಂತ ಪ್ರತಿಬಂಧಕಾಜ್ಞೆಯನ್ನು ಮುಂದುವರೆಸಿ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಆದೇಶ ಹೊರಡಿಸಿದ್ದಾರೆ.

ಮುಖಗವಸು ಧರಿಸದಿದ್ದರೆ ಅಂತಹವರ ವಿರುದ್ಧ ನಗರ ಪಾಲಿಕೆ ಪ್ರದೇಶಗಳಲ್ಲಿ ರೂ.250 ಮತ್ತು ಇನ್ನಿತರ ಪ್ರದೇಶಗಳಲ್ಲಿ  ರೂ.100 ದಂಡವನ್ನು ವಿಧಿಸಲಾಗುವುದು.

ಈ ಆದೇಶವನ್ನು  ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 188 ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾದಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here