ಯಾದಗಿರಿ:- ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಕಾಟನ್ ಮಿಲ್ ಗೆ ಬೆಂಕಿ ಹೊತ್ತಿದ ಪರಿಣಾಮ ಕೊಟ್ಯಾಂತರ ರೂ. ಮೌಲ್ಯದ ಹತ್ತಿ ಸುಟ್ಟು ಭಸ್ಮವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹುಲಕಲ್ ಬಳಿ ಜರುಗಿದೆ.
ಈ ಕಾಟನ್ ಮಿಲ್ ಗುರು ಮಣಿಕಂಠ ಎಂಬುವವರಿಗೆ ಸೇರಿದ್ದಾಗಿದೆ. ಅವಘಡದಲ್ಲಿ 15 ಕೋಟಿಗೂ ಹೆಚ್ಚು ಮೌಲ್ಯದ ಹತ್ತಿ ಹಾಗೂ ಯಂತ್ರೋಪರಣಗಳು ಸುಟ್ಟು ಹಾನಿಯಾಗಿದೆ. ಮೊದಲಿಗೆ ಹತ್ತಿಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕಾಟನ್ ಮಿಲ್ ಧಗಧಗನೇ ಹೊತ್ತಿ ಹುರಿದಿದೆ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಭೀಮರಾಯನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.



